ಕುಂದಾಪುರ:ವೆಂಟೆಡ್ ಡ್ಯಾಂಗಳ ಸ್ಥಿತಿ ಸುಧಾರಣೆ ಆಗಬೇಕು ಎನ್ನುವ ದೃಷ್ಟಿಯಿಂದ ಗ್ರಾಮಸ್ಥರ ಜತೆಗೂಡಿ ಪ್ರತಿಭಟನೆಯನ್ನು ಕೈಗೆತ್ತಿಗೊಳ್ಳಲಾಗಿದೆ.ಸಂಬಂದಪಟ್ಟ ಅಧಿಕಾರಿಗಳು ಸೂಕ್ತವಾದ ಉತ್ತರವನ್ನು ನೀಡದೆ ಪ್ರತಿಭಟನೆಯನ್ನು ಕೈಬೀಡುವ ಪ್ರಶ್ನೆ ಇಲ್ಲಾ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹಕ್ಲಾಡಿ ಗ್ರಾಮದ ತೋಪ್ಲು ಕಿಂಡಿ ಅಣೆಕಟ್ಟಿನ ಅವ್ಯವಸ್ಥೆ ವಿರುದ್ಧ ಬುಧವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ,ಅವರು ಮಾತನಾಡಿದರು.
ಸ್ಥಳೀಯರ ಬೇಡಿಕೆಗೆ ಅಧಿಕಾರಿಗಳು ಸ್ಪಂದನೆ ಮಾಡಬೇಕು,ಪ್ರತಿ ಊರಿನ ವ್ಯವಸ್ಥೆಗೂ ಅಧಿಕಾರಿಗಳು ಕಿವಿ ಗೊಡಬೇಕು.ಜನರ ಉಪಯೋಗಕ್ಕೆ ಅನುಕೂಲವಾಗುವಂತೆ ಡ್ಯಾಂಗಳ ನಿರ್ವಹಣೆಯನ್ನು ಮಾಡಬೇಕು.ಎಲ್ಲೆಲ್ಲಿ ಅವ್ಯವಸ್ಥೆ ಇದೆ ಅದರ ಬಗ್ಗೆ ತನಿಖೆ ಮಾಡಿ ಯೋಜನೆಯ ಲಾಭ ಜನರಿಗೆ ದೊರಕುವಂತೆ ಆಗಬೇಕು.ಅಣೆಕಟ್ಟಿಗೆ ಅಗತ್ಯವಾಗಿರುವ ಹಲಗೆಗಳನ್ನು ಒದಗಿಸಿಕೊಳ್ಳಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಸಣ್ಣ ನೀರಾವರಿ ಇಲಾಖೆ ಅಧಿನಕ್ಕೆ ಒಳಪಟ್ಟಿದ್ದ ಡ್ಯಾಂಗಳು ಜನರ ಉಪಯೋಗಕ್ಕೆ ಬಾರದ ರೀತಿಯಲ್ಲಿ ಕೆಲಸವನ್ನು ನಿರ್ವಹಿಸುತ್ತಿವೆ.ಜನರ ಅನುಕೂಲಕ್ಕೆ ತಕ್ಕಂತೆ ಯಾವುದೆ ರೀತಿ ವ್ಯವಸ್ಥೆಯನ್ನು ಅಧಿಕಾರಿಗಳು ಕಲ್ಪಿಸುತ್ತಿಲ್ಲ.ಬದಲಾದ ರಾಜಕೀಯ ವ್ಯವಸ್ಥೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿಯೇ ಬದಲಾದಂತೆ ಇದೆ ಎಂದು ಶಾಸಕರು ತಮ್ಮ ಅಸಾಮಾಧಾನವನ್ನು ಹೊರ ಹಾಕಿದರು.ಜನರಿಗೆ ತೊಂದರೆ ಆದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲಾ ಸದಾ ಕ್ಷೇತ್ರದ ಜನರ ಜತೆ ನಿಂತು ನ್ಯಾಯ ದೊರಕಿಸಿ ಕೊಡುವಂತ ಕೆಲಸವನ್ನು ಮಾಡಲಾಗುವುದು ಎಂದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಸುರೇಶ್ ಶೆಟ್ಟಿ ,ಕೃಷ್ಣ ಪ್ರಸಾದ್ ಅಡ್ಯಂತಾಯ,ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ,ಮಾಜಿ ಅಧ್ಯಕ್ಷ ಚೇತನ್ ಮೊಗವೀರ,ಸದಸ್ಯರಾದ ಚೇತನ ಹೆಗ್ಡೆ,ಮಂಜು ಮಡಿವಾಳ,ಜ್ಯೋತಿ ಮೊಗವೀರ,ಬಸವ.ಪಿ ನಾಯ್ಕ್,ಭಾಸ್ಕರ ಪೂಜಾರಿ,ಸ್ಥಳೀಯರಾದ ಸುರೇಂದ್ರ ಪೂಜಾರಿ,ಮಹೇಶ್ ಮೊಗವೀರ,ಗ್ರಾಮಸ್ಥರು ಉಪಸ್ಥಿತರಿದ್ದರು.ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ,ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಪುನೀತ್ ಮತ್ತು ನಾಗಲಿಂಗಯ್ಯ.ಆರ್.ಐ ರಾಘವೇಂದ್ರ ದೇವಾಡಿಗ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಬಸವರಾಜ ಕನಶೆಟ್ಟಿ (ತನಿಖೆ) ಮತ್ತು ಸಿಬ್ಬಂದಿಗಳು ಹಾಜರಿದ್ದರು.
(ಕಿಂಡಿ ಅಣೆಕಟ್ಟಿನ ಅವ್ಯವಸ್ಥೆ ವಿರುದ್ಧ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಗ್ರಾಮಸ್ಥರ ಜತೆಗೂಡಿ ಬುಧವಾರ ಪ್ರತಿಭಟನೆಯನ್ನು ನಡೆಸಿದರು)
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…