ಕುಂದಾಪುರ:ಬೈಂದೂರು ವಲಯದ ಹಕ್ಲಾಡಿ
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 121ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ ನವೆಂಬರ್ 29 ರಂದು ಬುಧವಾರ ಶಾಲೆಯ ವಠಾರದಲ್ಲಿ ನಡೆಯಲಿದೆ .ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬುಧವಾರ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ.
ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಧ್ವಜಾರೋಹಣ ನೆರವೇರಿಸಲಿದ್ದಾರೆ.ಶಾಲಾ
ಎಸ್ ಡಿ ಎಂ ಸಿ ಅಧ್ಯಕ್ಷ ಅಯೂಬ್ ಮಾಣಿಕೋಳಲು ಅಧ್ಯಕ್ಷತೆ ವಹಿಸಲಿದ್ದಾರೆ.ಹಕ್ಲಾಡಿ ಪಂಚಾಯತ್ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ ಸೇರಿದಂತೆ,ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.ಸಂಜೆ 7 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.ಸಂಜೆ 6.30 ರಿಂದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರುಗಲಿದೆ.ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ,ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಹಾಗೂ “ಚೆಲುವೆ ಚಿತ್ರ ನಯನೆ” ಎನ್ನುವ ಯಕ್ಷಗಾನ ಪ್ರದರ್ಶನ ನಡೆಯಲಿದೆ ಲಿದೆ.
ಹಕ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ
ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ.ಬಿ ಮಾತನಾಡಿ, ಶಾಲೆಯಲ್ಲಿ ನಡೆಯಲಿರುವ 121ನೇ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮಕ್ಕೆ ಊರ ಗ್ರಾಮಸ್ಥರು,
ವಿದ್ಯಾಭಿಮಾನಿಗಳು,ಸಂಘ ಸಂಸ್ಥೆಗಳ ಸದಸ್ಯರು,ಮಕ್ಕಳ ಪೋಷಕರು ಭಾಗವಹಿಸಬೇಕೆಂದು ವಿನಂತಿಸಿದರು.ಈ ಸಂದರ್ಭ ಹಕ್ಲಾಡಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು,ಎಸ್ ಡಿಂಸಿ ಅಧ್ಯಕ್ಷ ಅಯೂಬ್ ಮಾಣಿಕೊಳಲು ಮತ್ತು ಸರ್ವ ಸದಸ್ಯರು
ಶಾಲಾ ಅಭಿವೃದ್ಧಿ ಸಮಿತಿ, ಲಯನ್ಸ್ ಕ್ಲಬ್ ಹಕ್ಲಾಡಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…