ಡಿ.3ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಾವುಂದದಲ್ಲಿ ನಡೆಯಲಿದೆ

ಕುಂದಾಪುರ:ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಆಶ್ರಯದಲ್ಲಿ,ಉಡುಪಿ ಆದರ್ಶ ಆಸ್ಪತ್ರೆ ಸಹಯೋಗದಲ್ಲಿ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಡಿ.3ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಮಾತನಾಡಿ,ಶಿಬಿರಕ್ಕೆ
ವೈದ್ಯಕೀಯ ತಜ್ಞ ಡಾ.ಜಿ.ಎಸ್.ಚಂದ್ರಶೇಖರ, ನರರೋಗ ಶಸ್ತ್ರಚಿಕಿತ್ಸಾ ತಜ್ಞ ಡಾ.ಎ.ರಾಜಾ ಸೇರಿದಂತೆ 25ಕ್ಕೂ ಹೆಚ್ಚು ತಜ್ಞ ವೈದ್ಯರು ಭಾಗವಹಿಸಲಿದ್ದಾರೆ ಆರೋಗ್ಯ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.ಹತ್ತು ವರ್ಷಗಳ ಹಿಂದೆ ಸಂಘದ ವ್ಯಾಪ್ತಿಯಲ್ಲಿ ಇದೇ ರೀತಿಯ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ಬಾರಿ ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ತಾಲೂಕುಮಟ್ಟದಲ್ಲಿ ಶಿಬಿರ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ
ಸಂಘದ ಉಪಾಧ್ಯಕ್ಷ ಎಂ.ಚಂದ್ರಶೀಲ ಶೆಟ್ಟಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ, ನಿರ್ದೇಶಕರಾದ ಎಂ.ವಿನಾಯಕ ರಾವ್,ಜಗದೀಶ ಪಿ.ಪೂಜಾರಿ, ನರಸಿಂಹ ದೇವಾಡಿಗ, ವಾಸು ಪೂಜಾರಿ,ಭೋಜ ನಾಯ್ಕ, ರಾಮಕೃಷ್ಣ ಖಾರ್ವಿ,ಪ್ರಕಾಶ ದೇವಾಡಿಗ, ಳಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ,ರಾಮ, ನಾಗಮ್ಮ,ಸರೋಜಾ ಆರ್.ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.






















































































































































































































































































































































































































































































































































































































































































































































































































































































































































































































































































































































































































































































































































































































































































