ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪ್ರಸಾದ ಸ್ವೀಕರಿಸಿದರು.
ಕೋಟೇಶ್ವರದ ’ಕೊಡಿ’ ಹಬ್ಬದ ಮಾರನೇಯ ದಿನದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೊಡಿ ಹಬ್ಬ ನಡೆಯುತ್ತದೆ.ಬೈಂದೂರು ಹಾಗೂ ಉಪ್ಪುಂದ ಭಾಗದ ಜನರು ’ಉಪ್ಪುಂದದ ಕೊಡಿ ಹಬ್ಬ’ ಎಂದು ಕರೆಯುವ ಸಂಪ್ರದಾಯವಿದೆ.ಹೊಸ ಮದುಮಕ್ಕಳು ಹಾಗೂ ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತುಕೊಳ್ಳುವವರು ಹಬ್ಬದ ದಿನದಂದು ಶ್ರೀ ದೇವಿಯ ದರ್ಶನ ಮಾಡಿ ಕಬ್ಬಿನ ಜಲ್ಲೆ (ಕೊಡಿ)ಯನ್ನು ಮನೆಗೆ ಒಯ್ಯುವುದು ಇಲ್ಲಿನ ಕಟ್ಟ ಕಟ್ಟಳೆ ಆಗಿದೆ.ವೃಶ್ಚಿಕ ಮಾಸದಲ್ಲಿ ನಡೆಯುವ ಬ್ರಹ್ಮ ರಥೋತ್ಸವದ ಸಂಪ್ರದಾಯದಂತೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.ಬೆಳಿಗ್ಗೆ ಬ್ರಹ್ಮರಥದಲ್ಲಿ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ರಥಬೀದಿಯಲ್ಲಿ ರಥವನ್ನು ಎಳೆಯುವ ಮೂಲಕ ಸಾಂಪ್ರದಾಯಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಸಂಜೆ ರಥೋತ್ಸವ ಅವರೋಹಣಾ ವಿಧಿಯನ್ನು ಪೂರೈಸಲಾಯಿತು.
ಶ್ರೀ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ವಾರ್ಷಿಕ ಜಾತ್ರೆಯಂದು ಹರಾಜು ಹಾಕುವ ಸಂಪ್ರದಾಯದಂತೆ ಇಂದು ನಡೆದ ಸೀರೆ ಹರಾಜಿನಲ್ಲಿ ಭಾಗವಹಿಸಿದ ನೂರಾರು ಮಂದಿ ಶ್ರೀ ದೇವಿಯ ಪ್ರಸಾದ ರೂಪ ಎಂಬಂತೆ ಸೀರೆಗಳನ್ನು ಹರಾಜಿನಲ್ಲಿ ಪಡೆದುಕೊಂಡರು.ಮೀನುಗಾರರ ಆರಾಧ್ಯ ದೇವತೆ
ಕರಾವಳಿ ತೀರ ಪ್ರದೇಶದ ತಟದಲ್ಲಿ ಇರುವ ಈ ದೇವಸ್ಥಾನಕ್ಕೆ ಮೀನುಗಾರರು ಹೆಚ್ಚು ನಡೆದುಕೊಳ್ಳುತ್ತಾರೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ವೃತ್ತಿ ಬದುಕಿಗೆ ತೆರಳುವ ನಮ್ಮನ್ನು ಕಾಯುವವಳು ಅವಳೇ ಎನ್ನುವ ನಂಬಿಕೆ ಈ ಭಾಗದಲ್ಲಿ ಜನ ಜನಿತ. ಹಾಗಾಗಿ ಇಲ್ಲಿನ ಮೀನುಗಾರರ ಬಂಧುಗಳು ಎಲ್ಲಿಯೇ ನೆಲೆಸಿದ್ದರೂ ವಾರ್ಷಿಕ ಜಾತ್ರೆಗೆ ಬಂದು ದೇವಿಯ ದರ್ಶನ ಮಾಡುವ ಸಂಪ್ರದಾಯವನ್ನು ಹೆಚ್ಚಿನವರು ರೂಢಿಸಿಕೊಂಡಿದ್ದಾರೆ.
ಕೊಲ್ಲೂರಿನ ವೇ| ಮೂ| ಮಂಜುನಾಥ ಅಡಿಗ ಮಾರ್ಗದರ್ಶನದಲ್ಲಿ ಗೋಕರ್ಣದ ತಂತ್ರಿ ಗಣಪತಿ ಭಟ್ ಹೀರೆ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ನೆರವೇರಿತು.
ಈ ಸಂದರ್ಭದಲ್ಲಿಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ,
ಪ್ರಧಾನ ಅರ್ಚಕ ವೇ| ಮೂ| ಪ್ರಕಾಶ ಉಡುಪ, ಶಂಕರನಾರಾಯಣ ಪುರಾಣಿಕ,ದೇವಸ್ಥಾನದ ಆಡಳಿತಾಧಿಕಾರಿ, ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್., ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭೀಮಪ್ಪ ಎಚ್. ಬಿಲ್ದಾರ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಬಿಜೂರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ, ದೇವಸ್ಥಾನದ ಅರ್ಚಕ ಯು. ಸಂದೇಶ ಭಟ್, ಸಿಬಂದಿಯಾದ ಸುರೇಶ ಭಟ್, ಗಣೇಶ ದೇವಾಡಿಗ ಮತ್ತಿತರರು ಹಾಗೂ ಭಕ್ತರು ಉಪಸ್ಥಿತರಿದ್ದರು.ಸವಿತೃತೇಜ ಪಿ.ಡಿ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಮಹೇಶ್ ಕಂಬಿ ಬೈಂದೂರು ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ವರ್ಗದವರಿಂದ ಬಿಗಿ ಬಂದೋಬಸ್ತ್ ಏರ್ಪಡಿಸ ಲಾಗಿತ್ತು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…