ಕುಂದಾಪುರ

ಉಪ್ಪುಂದ:ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವ

Share

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪ್ರಸಾದ ಸ್ವೀಕರಿಸಿದರು.

ಕೋಟೇಶ್ವರದ ’ಕೊಡಿ’ ಹಬ್ಬದ ಮಾರನೇಯ ದಿನದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೊಡಿ ಹಬ್ಬ ನಡೆಯುತ್ತದೆ.ಬೈಂದೂರು ಹಾಗೂ ಉಪ್ಪುಂದ ಭಾಗದ ಜನರು ’ಉಪ್ಪುಂದದ ಕೊಡಿ ಹಬ್ಬ’ ಎಂದು ಕರೆಯುವ ಸಂಪ್ರದಾಯವಿದೆ.ಹೊಸ ಮದುಮಕ್ಕಳು ಹಾಗೂ ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತುಕೊಳ್ಳುವವರು ಹಬ್ಬದ ದಿನದಂದು ಶ್ರೀ ದೇವಿಯ ದರ್ಶನ ಮಾಡಿ ಕಬ್ಬಿನ ಜಲ್ಲೆ (ಕೊಡಿ)ಯನ್ನು ಮನೆಗೆ ಒಯ್ಯುವುದು ಇಲ್ಲಿನ ಕಟ್ಟ ಕಟ್ಟಳೆ ಆಗಿದೆ.ವೃಶ್ಚಿಕ ಮಾಸದಲ್ಲಿ ನಡೆಯುವ ಬ್ರಹ್ಮ ರಥೋತ್ಸವದ ಸಂಪ್ರದಾಯದಂತೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.ಬೆಳಿಗ್ಗೆ ಬ್ರಹ್ಮರಥದಲ್ಲಿ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ರಥಬೀದಿಯಲ್ಲಿ ರಥವನ್ನು ಎಳೆಯುವ ಮೂಲಕ ಸಾಂಪ್ರದಾಯಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಸಂಜೆ ರಥೋತ್ಸವ ಅವರೋಹಣಾ ವಿಧಿಯನ್ನು ಪೂರೈಸಲಾಯಿತು.

ಶ್ರೀ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ವಾರ್ಷಿಕ ಜಾತ್ರೆಯಂದು ಹರಾಜು ಹಾಕುವ ಸಂಪ್ರದಾಯದಂತೆ ಇಂದು ನಡೆದ ಸೀರೆ ಹರಾಜಿನಲ್ಲಿ ಭಾಗವಹಿಸಿದ ನೂರಾರು ಮಂದಿ ಶ್ರೀ ದೇವಿಯ ಪ್ರಸಾದ ರೂಪ ಎಂಬಂತೆ ಸೀರೆಗಳನ್ನು ಹರಾಜಿನಲ್ಲಿ ಪಡೆದುಕೊಂಡರು.ಮೀನುಗಾರರ ಆರಾಧ್ಯ ದೇವತೆ
ಕರಾವಳಿ ತೀರ ಪ್ರದೇಶದ ತಟದಲ್ಲಿ ಇರುವ ಈ ದೇವಸ್ಥಾನಕ್ಕೆ ಮೀನುಗಾರರು ಹೆಚ್ಚು ನಡೆದುಕೊಳ್ಳುತ್ತಾರೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ವೃತ್ತಿ ಬದುಕಿಗೆ ತೆರಳುವ ನಮ್ಮನ್ನು ಕಾಯುವವಳು ಅವಳೇ ಎನ್ನುವ ನಂಬಿಕೆ ಈ ಭಾಗದಲ್ಲಿ ಜನ ಜನಿತ. ಹಾಗಾಗಿ ಇಲ್ಲಿನ ಮೀನುಗಾರರ ಬಂಧುಗಳು ಎಲ್ಲಿಯೇ ನೆಲೆಸಿದ್ದರೂ ವಾರ್ಷಿಕ ಜಾತ್ರೆಗೆ ಬಂದು ದೇವಿಯ ದರ್ಶನ ಮಾಡುವ ಸಂಪ್ರದಾಯವನ್ನು ಹೆಚ್ಚಿನವರು ರೂಢಿಸಿಕೊಂಡಿದ್ದಾರೆ.

ಕೊಲ್ಲೂರಿನ ವೇ| ಮೂ| ಮಂಜುನಾಥ ಅಡಿಗ ಮಾರ್ಗದರ್ಶನದಲ್ಲಿ ಗೋಕರ್ಣದ ತಂತ್ರಿ ಗಣಪತಿ ಭಟ್‌ ಹೀರೆ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ನೆರವೇರಿತು.
ಈ ಸಂದರ್ಭದಲ್ಲಿಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ,
ಪ್ರಧಾನ ಅರ್ಚಕ ವೇ| ಮೂ| ಪ್ರಕಾಶ ಉಡುಪ, ಶಂಕರನಾರಾಯಣ ಪುರಾಣಿಕ,ದೇವಸ್ಥಾನದ ಆಡಳಿತಾಧಿಕಾರಿ, ಬೈಂದೂರು ತಹಶೀಲ್ದಾರ್‌ ಪ್ರದೀಪ್‌ ಆರ್‌., ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭೀಮಪ್ಪ ಎಚ್‌. ಬಿಲ್ದಾರ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಬಿಜೂರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಎಸ್‌. ಸುರೇಶ್‌ ಶೆಟ್ಟಿ, ದೇವಸ್ಥಾನದ ಅರ್ಚಕ ಯು. ಸಂದೇಶ ಭಟ್‌, ಸಿಬಂದಿಯಾದ ಸುರೇಶ ಭಟ್‌, ಗಣೇಶ ದೇವಾಡಿಗ ಮತ್ತಿತರರು ಹಾಗೂ ಭಕ್ತರು ಉಪಸ್ಥಿತರಿದ್ದರು.ಸವಿತೃತೇಜ ಪಿ.ಡಿ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಮಹೇಶ್ ಕಂಬಿ ಬೈಂದೂರು ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ವರ್ಗದವರಿಂದ ಬಿಗಿ ಬಂದೋಬಸ್ತ್‌ ಏರ್ಪಡಿಸ ಲಾಗಿತ್ತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago