ಕುಂದಾಪುರ

ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆ 121ನೇ ವಾರ್ಷಿಕೋತ್ಸವ ಕಾರ್ಯಕ್ರಮ

Share

(ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು)

ಕುಂದಾಪುರ:ಬೈಂದೂರು ವಲಯದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ 121ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಬುಧವಾರ ಅದ್ದೂರಿಯಾಗಿ ನಡೆಯಿತು.ಸಾಂಸ್ಕ್ರತಿಕ ವೈಭವ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ,ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಹಾಗೂ ಚೆಲುವೆ ಚಿತ್ರ ನಯನೆ ಎಂಬ ಯಕ್ಷಗಾನ ಪ್ರದರ್ಶನ ಜರುಗಿತು.ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮಾತನಾಡಿ,ಸಾರ್ವಜನಿಕರ ಸಹಭಾಗಿತ್ವ ಎಸ್‍ಡಿಎಂಸಿ ಸದಸ್ಯರ ಹೋರಾಟ ಶಿಕ್ಷಕರ ಪ್ರಯತ್ನದಿಂದ ಗ್ರಾಮಾಂತರ ಪ್ರದೇಶದಲ್ಲಿರುವ ಹಕ್ಲಾಡಿ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.ಮಕ್ಕಳ ಆಟೋಟ ಚಟುವಟಿಕೆಗಳಿಗೆ ಮೈದಾನದ ಕೊರತೆ ಇದೆ,ಶಾಲೆಗೆ ಸಂಬಂಧಿಸಿದ ಸುಮಾರು 40 ಸೆಂಟ್ಸ್ ಜಾಗವನ್ನು ಸಮತಟ್ಟು ಮಾಡಿ ಮಕ್ಕಳ ಅನುಕೂಲಕ್ಕೆ ತಕ್ಕಂತೆ ಮೈದಾನ ನಿರ್ಮಾಣ ಮಾಡಬೇಕಾದ ಅಗತ್ಯವಿದ್ದು,ವಿದ್ಯಾಭಿಮಾನಿಗಳು,ಗ್ರಾಮಸ್ಥರು ಕೈಜೋಡಿಸಬೇಕು ಎಂದು ಹೇಳಿದರು.ಕೃಷಿ ಕೂಲಿ ಕಾರ್ಮಿಕರು,ಬಡವರ ಮಕ್ಕಳು ವಿದ್ಯಾರ್ಜನೆ ಮಾಡುತ್ತಿರುವ ಸರಕಾರಿ ಶಾಲೆಗಳ ಗುಣಮಟ್ಟದ ಸುಧಾರಣೆಗೆ ಸರ್ಕಾರ ಇನ್ನಷ್ಟು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಮಾತನಾಡಿ,ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಹಕ್ಲಾಡಿ ಶಾಲೆ ಮಾದರಿ ಶಾಲೆಗಳಲ್ಲಿ ಒಂದಾಗಿದೆ.ಶಾಲೆಗೆ ಅಗತ್ಯವಾಗಿ ಬೇಕಾಗಿರುವ ಡೆಸ್ಕ್,ಕಂಪ್ಯೂಟರ್ ಲ್ಯಾಪ್ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.121 ವರ್ಷಗಳ ಕಾಲದ ಇತಿಹಾಸ ಹೊಂದಿರುವ ಶಾಲೆಯಲ್ಲಿ ನೂರಾರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಶಾಲೆಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಆಗಿದೆ ಎಂದರು.ಕೇವಲ ಶಿಕ್ಷಣವನ್ನು ಪಡೆಯದೆ ಶಾಲಾ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಹಳೆ ವಿದ್ಯಾರ್ಥಿಗಳ ಕೊಡುಗೆ ಅಪಾರವಾದದ್ದು ಎಂದು ಬಣ್ಣಿಸಿದರು.

ಹಕ್ಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ ಮಾತನಾಡಿ,ಮಕ್ಕಳು ಪಠ್ಯದಲ್ಲಿ ಮಾತ್ರ ತೊಡಗಿಸಿಕೊಳ್ಳದೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿಸುವುದರಿಂದ ಸ್ಪರ್ಧಾತ್ಮಕಯುಗದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಹೇಳಿದರು.ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ ಸಂಸ್ಕಾರಯುತ ಶಿಕ್ಷಣದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಹೆಮ್ಮಾಡಿ ಪಂಚಾಂಗ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮಾತನಾಡಿ,ಹಕ್ಲಾಡಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಹಕ್ಲಾಡಿ ಗ್ರಾಮದ ಎರಡು ಕಣ್ಣುಗಳು ಇದ್ದಾ ಹಾಗೆ ಎಂದು ಹೇಳಿದರು.ಶಾಲೆಯ ಬಾಗಿಲುಗಳು ಸದಾ ತೆರೆದಿರುವುದರಿಂದ ಮಾತ್ರ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯವಿದೆ.ಸರಕಾರಿ ಶಾಲೆಗಳು ಉಳಿಯಬೇಕಾದರೆ ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಬೇಕೆಂದು ಕಿವಿ ಮಾತು ಹೇಳಿದರು.

ಲಯನ್ಸ್ ಕ್ಲಬ್ ಹಕ್ಲಾಡಿ ಅಧ್ಯಕ್ಷ ಗಣಪಯ್ಯ ಶೆಟ್ಟಿ ಮಾತನಾಡಿ,ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಾವು ಕಲಿತ ಶಾಲೆ ಮೇಲೆ ಅಭಿಮಾನವನ್ನು ತೋರ್ಪಡಿಸುವುದರಿಂದ ಶಾಲೆ ಸರ್ವೋತೊಮುಖ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಹೇಳಿದರು.
ಪ್ರಥಮ ದರ್ಜೆ ಗುತ್ತಿಗೆದಾರರಾದ ರಾಜೀವ ಶೆಟ್ಟಿ ಹಕ್ಲಾಡಿ ಮಾತನಾಡಿ,ಶುಭಾಶಯ ಕೋರಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ.ಬಿ ಅವರು ಮಾತನಾಡಿ,ಶಾಲೆಯಲ್ಲಿ ಜರುಗಿದ 121ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ, ದಾನಿಗಳಿಗೆ,ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ,ಗ್ರಾಮಸ್ಥರಿಗೆ,ಗ್ರಾಮ ಪಂಚಾಯತ್ ಹಕ್ಲಾಡಿಗೆ, ಜನಪ್ರತಿನಿಧಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಹಕ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚೇತನ್ ಮೊಗವೀರ,ಗ್ರಾಮ ಮಟ್ಟದ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಅಧ್ಯಕ್ಷ ಚಂದ್ರಹಾಸ, ಗ್ರಾಮ ಪಂಚಾಯತ್ ಸದಸ್ಯೆ ಶಾರದ, ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಮಾಜಿ ಅಧ್ಯಕ್ಷರಾದ ಸತೀಶ್ ಕುಮಾರ್ ಶೆಟ್ಟಿ, ನಾಗೇಶ್ ಪೂಜಾರಿ,ಕೆ.ಎಸ್.ಎಸ್ ಸರ್ಕಾರಿ ಪ್ರೌಢಶಾಲೆ ಹಕ್ಲಾಡಿ ಮುಖ್ಯ ಶಿಕ್ಷಕ ಮಂಜುನಾಥ್ ಶೇರಿಗಾರ್, ಎಸ್ ಡಿ ಎಂ ಸಿ ಅಧ್ಯಕ್ಷ ಅಯೂಬ್ ಮಾಣಿಕೊಳಲು ಮತ್ತು ಉಪಾಧ್ಯಕ್ಷೆ ಶಾಂತ, ಶಾಲಾ ವಿದ್ಯಾರ್ಥಿ ನಾಯಕಿ ಭೂಮಿಕಾ,ಎಸ್ ಡಿ ಎಂ ಸಿ ಸದಸ್ಯರಾದ ಇಬ್ರಾಹಿಂ,ಚಂದ್ರ,ಅಶ್ರಫ್,ಉದಯ ಮಡಿವಾಳ,ರತ್ನ,ಉದಯ,ಶಶಿಕಲಾ,ಸುಪ್ರೀತಾ,ರಾಮ ದೇವಾಡಿಗ,ಪ್ರೀತಿ,ರಾಜೀವ ಪೂಜಾರಿ,ವಿದ್ಯಾ ಆಚಾರ್ಯ,ಮಮತಾ,ಗೀತಾ,ಸತ್ಯವತಿ,ಅಧ್ಯಾಪಕ ವೃಂದದವರು,ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಎಸ್.ಡಿ.ಎಂ.ಸಿ ಸದಸ್ಯ ಸುರೇಶ್ ಹಕ್ಲಾಡಿ ಸ್ವಾಗತಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಬಿ ವಾರ್ಷಿಕ ವರದಿ ವಾಚಿಸಿದರು.ಸಹ ಶಿಕ್ಷಕರಾದ ಶ್ಯಾಮಲಾ,ಶಿವರಾಜ್ ನಿರೂಪಿಸಿದರು.ಶಿಕ್ಷಕಿ ಚಂದ್ರಿಕಾ ವಂದಿಸಿದರು.

ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯ ಅಭಿವೃದ್ಧಿಗೆ ಲಯನ್ಸ್ ಕ್ಲಬ್ ಹಕ್ಲಾಡಿ ವತಿಯಿಂದ 75,000.ರೂ ಧನಸಹಾಯವನ್ನು ನೀಡಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago