ಹೆಮ್ಮಾಡಿ:ಅಪಘಾತ,ಬಸ್ ಡ್ರೈವರ್ ಸಾವು

ಕುಂದಾಪುರ:ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಾಬಲ ತೋಪ್ಲು ಅವರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ.
ಎಂದಿನಂತೆ ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಬಸ್ ನ್ನು ನೂಜಾಡಿ ಸ್ಟಾಪ್ ನಲ್ಲಿ ನಿಲ್ಲಿಸಿ ಬೈಕ್ ನಿಂದ ಹೆಮ್ಮಾಡಿ ಯಿಂದ ತೋಪ್ಲುಗೆ ತೆರಳುತ್ತಿದ್ದ ಸಂದರ್ಭ ಹೆಮ್ಮಾಡಿ ಹಾಲು ಡೈರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂಟರ್ನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಾಯಕಾರಿ ಡಿವೈಡರ್: ಹೆಮ್ಮಾಡಿ ಹಾಲು ಡೈರಿ ಬಳಿ ಬಾಯಿ ತೆರೆದು ಕೊಂಡಿರುವ ಡಿವೈಡರ್ ಅಪಾಯಕಾರಿ ಆಗಿದ್ದು ಅಪಘಾತ ವಲಯವಾಗಿ ಮಾರ್ಪಟ್ಟಿದೆ.