ಕುಂದಾಪುರ:ಹಳ್ಳಿ ಜನರು ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದಲೇ ದೇಶ ಅಭಿವೃದ್ದಿ ಪಥದತ್ತ ಸಾಗಲು ಸಹಕಾರಿ ಆಗಿದೆ.ಶಿಕ್ಷಣದಿಂದ ಬಡತನವನ್ನು ಹೊಗಲಾಡಿಸ ಬಹುದೆಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಬೈಂದೂರು ವಲಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಗುರುವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ವಿದ್ಯಾಭ್ಯಾಸದ ಜತೆಗೆ ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣವನ್ನು ನೀಡುವಲ್ಲಿ ಪೋಷಕರು ಹೆಚ್ಚಿನ ಗಮನವನ್ನು ಹರಿಸಬೇಕಾಗಿದೆ.ಮಕ್ಕಳ ಭವಿಷ್ಯವನ್ನು ನಿರೂಪಿಸುವಲ್ಲಿ ಶಿಕ್ಷಕರ ಪಾತ್ರದ ಜತೆಗೆ ಹೆತ್ತವರ ಪಾತ್ರವೂ ಕೂಡ ಮಕ್ಕಳ ಮುಖ್ಯವಾದ ಅಂಶವಾಗಿದೆ ಎಂದರು.
ಉದ್ಯಮಿ ವೀರೇಶ್ ಪೂಜಾರಿ ಉದ್ಘಾಟಿಸಿದರು.ಶ್ರೀಲಕ್ಷ್ಮೀನಾರಾಯಣ ದೇವಸ್ಥಾನ ಹೆಮ್ಮಾಡಿ ಆಡಳಿತ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಭಟ್ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತ್ಯನಾರಾಯಣ ರಾವ್,ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್,ದೈಹಿಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಸಮನ್ವಯಾಧಿಕಾರಿ ಮಂಜುನಾಥ ನಾಯ್ಕ್,ನಿವೃತ್ತ ಶಿಕ್ಷಕ ಶಂಕರ ಮಡಿವಾಳ,ಚಂದ್ರ ಪೂಜಾರಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಭಂಡಾರಿ,ವೀಣಾ.ಆರ್ ಕೋಟ್ಯಾನ್,ಸಾಧು ಎಸ್.ಬಿಲ್ಲವ,ಶಾಲಾ ವಾರ್ಷಿಕೋತ್ಸವ ಸಮಿತಿ ಗೌರವಾಧ್ಯಕ್ಷ ದೇವಪ್ಪ ಪೂಜಾರಿ ಮತ್ತು ಅಧ್ಯಕ್ಷ ಶಾಂತರಾಮ ಭಟ್,ಜೆ.ಸಿ.ಐ ಕುಂದಾಪುರ ಅಧ್ಯಕ್ಷ ರಾಘವೇಂದ್ರ ಕುಲಾಲ್,ಪ್ರವೀಣ ದೇವಾಡಿಗ,ನಾಗರಾಜ ಗಾಣಿಗ,ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕ ದಿವಾಕರ ಸ್ವಾಗತಿಸಿದರು.ಶಿಕ್ಷಕ ಜಗದೀಶ್ ಶೆಟ್ಟಿ ನಿರೂಪಿಸಿದರು.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಲರವ ಕಾರ್ಯಕ್ರಮ,ಯಕ್ಷಗಾನ ಪ್ರದರ್ಶನ,ಮನೋರಂಜನಾ ಕಾರ್ಯಕ್ರಮ ಜರುಗಿತು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…