ಕುಂದಾಪುರ:ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೇದಾರ್ ಮರವಂತೆ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಶ್ರದ್ಧಾ ಮೊಗವೀರ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…