ಬೈಂದೂರು:ಜಾನುವಾರು ಬಂಜೆತನ ಹಾಗೂ ಬ್ರಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ ಬಿಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ನಡೆಯಿತು.ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಶಿಬಿರಕ್ಕೆ ಚಾಲನೆಯನ್ನು ನೀಡಿದರು.
ಬಿಜೂರು ಪಂಚಾಯತ್ ಉಪಾಧ್ಯಕ್ಷ ರಂಜಿತ್, ಸದಸ್ಯರಾದ ವೀರೇಂದ್ರ ಶೆಟ್ಟಿ, ನಾಗರಾಜ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.ಲವಣ ಮಿಶ್ರಿತ ಆಹಾರದ ಪೊಟ್ಟಣ ವಿತರಿಸಲಾಯಿತು.ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ,ಡಾ.ರೆಡ್ಡಪ್ಪ ಎಂ.ಸಿ ಉಪನಿರ್ದೇಶಕರು (ಆಡಳಿತ) ರವರ ಮಾರ್ಗರ್ಶನದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಬಿಜೂರ್ ಪಂಚಾಯತ್ನ ಪಶು ಸಖಿ ಶಿಲ್ಪ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಇಲಾಖಾ ಸಿಬ್ಬಂದಿಗಳಾದ ಸಿದ್ರಾಮ, ಪ್ರಶಾಂತ್ ಕುಲ್ಕರ್ಣಿ,ಪಾರ್ವತಿ, ಅಶ್ವಿನಿ, ಶಿಲ್ಪ ಮುಂತಾದವರು ಹಾಜರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…