ಕುಂದಾಪುರ

ರಾಷ್ಟ್ರೀಯ ಮಟ್ಟದ ಕಲೋತ್ಸವ ಸ್ಪರ್ಧೆಗೆ ಹೆಮ್ಮಾಡಿ ಜನತಾ ಕಾಲೇಜಿನ ಕೇದಾರ ಮರವಂತೆ ಆಯ್ಕೆ

Share

ಕುಂದಾಪುರ:ಕೇಂದ್ರ ಸರಕಾರ ಶಿಕ್ಷಣ ಇಲಾಖೆಯ ಮಾಧ್ಯಮಿಕ ಶಿಕ್ಷಣ ವಿಭಾಗವು ಮಾಧ್ಯಮಿಕ ಹಂತದ ಶಿಕ್ಷಣದಲ್ಲಿ ಕಲಾ ಮತ್ತು ಸಾಂಸ್ಕೃತಿಕ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ನಡೆಸುತ್ತಿರುವ ರಾಷ್ಟ್ರ ಮಟ್ಟದ ಕಲಾ ಉತ್ಸವ ಸ್ಪರ್ಧೆಗೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೇದಾರ ಮರವಂತೆ ಆಯ್ಕೆಯಾಗಿದ್ದಾರೆ.
ಶಾಸ್ತ್ರೀಯ ಗಾಯನ ಸ್ಪರ್ಧಾ ವಿಭಾಗದಲ್ಲಿ ಕೇದಾರ ಮರವಂತೆ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಹಿಂದೂಸ್ತಾನಿ ಶಾಸ್ತ್ರೀಯ ಗಾಯನದ ಗ್ವಾಲಿಯರ್ – ಪಾಟಿಯಾಲ – ಕಿರಾಣಾ ಘರಾಣೆಯ ಗಾಯಕ, ಗೋಪಾಡಿಯಲ್ಲಿ ನೆಲಸಿರುವ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಅವರ ಶಿಷ್ಯ. ಮರವಂತೆಯ ಜತೀಂದ್ರ – ರೂಪಶ್ರೀ ದಂಪತಿಯ ಪುತ್ರ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago