ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ:ಕ್ಲಾಟ್ ಪರೀಕ್ಷೆಯಲ್ಲಿ ಅನಘಾ ನಾಯಕ್ ಸಾಧನೆ

ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನಘಾ ನಾಯಕ್ ಅವರು ಕೇಂದ್ರೀಕೃತ ರಾಷ್ಟ್ರೀಯ ಮಟ್ಟದ ಸರ್ಕಾರಿ ಪ್ರವೇಶ ಪರೀಕ್ಷೆಯಾದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಅಐಂಖಿ-2023) ಯಲ್ಲಿ ಅತ್ಯುತ್ತಮ ಸಾಧನೆ ಮಾಡುವುದರೊಂದಿಗೆ ರಾಜ್ಯ ಮಟ್ಟದಲ್ಲಿ 964ನೇ ರ್ಯಾಂಕ್ ಗಳಿಸುವುದರ ಮೂಲಕ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಅನಘಾ ನಾಯಕ್ ಅವರು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾರೆ.ಈ ವಿದ್ಯಾ ಸಂಸ್ಥೆಯು,ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧಾತಕ್ಮ ಪರೀಕ್ಷೆಗಳಿಗೆ ಅನುಭವಿ ಅಧ್ಯಾಪಕರಿಂದ ತರಬೇತಿಯನ್ನು ನೀಡುತ್ತಿದೆ.ಈ ನಿಟ್ಟಿನಲ್ಲಿ ಅನೇಕ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆಗಳನ್ನು ಮಾಡಿರುತ್ತಾರೆ.ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಶಿಕ್ಷಕವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.