ಬೈಂದೂರು:ಮೀನುಗಾರಿಕೆಗೆ ತೆರಳಿ ವಾಪಾಸ್ಸು ಮರಳಿ ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವನ್ನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.
ಭಾನುವಾರ ರಾತ್ರಿ 10-00 ಗಂಟೆಗೆ ಸುಮಾರಿಗೆ ಶಿರೂರು ಕಳುಹಿತ್ಲುನಿಂದ ನುಮೈರಾ ಅಂಜುಮ್ ಎಂಬ ಹೆಸರಿನ ದೋಣಿಯಲ್ಲಿ 3 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ವೇಳೆ ಸೋಮವಾರ ಮುಂಜಾವು 01.30 ರ ಗಂಟೆ ಸುಮಾರಿಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ದೋಣಿ ಮಗುಚಿ ಬಿದ್ದಿದೆ ಪರಿಣಾಮ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ (45 ) ಹಡವಿನಕೋಣೆ ಶಿರೂರು ಮಿಸ್ಬಾ ಯೂಸುಫ್ (48) ಕುದ್ವಾಯಿ ರೋಡ್ ಭಟ್ಕಳ ಅವರು ಮೃತಪಟ್ಟಿದ್ದಾರೆ.ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( 37) ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ ಮಾಡಿದ್ದಾರೆ.ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರ ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬಂಧಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…