ಕುಂದಾಪುರ:ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ತಾನು ಓದಿರುವ ಹೂಟ್ಟುರು ಶಾಲೆಯನ್ನು ಐದು ವರ್ಷಗಳ ಅವಧಿ ವರೆಗೆ ದತ್ತು ತೆಗೆದುಕೊಳ್ಳುವುದರ ಮುಖೇನ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ಕನ್ನಡ ಸಿನೆಮಾ ರಂಗದಲ್ಲಿ ತನ್ನದೇ ಛಾಪು ಮೂಡಿಸಿ ಮನೆ ಮಾತಾಗಿರುವ ರಿಷಬ್ ಶೆಟ್ಟಿ ಅವರು ತನ್ನ ತವರಿನಲ್ಲಿರುವ ಕೆರಾಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ. ಸಮೃದ್ಧ ಬೈಂದೂರು ಅಭಿವೃದ್ಧಿಗೆ ಕೈ ಜೋಡಿಸುಡಿಸುತ್ತಿರುವ ರಿಷಬ್ ಶೆಟ್ಟಿ ಅವರು ತಾನು ಕಲಿತ ಶಾಲೆಯನ್ನು ದತ್ತು ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಒತ್ತನ್ನು ನೀಡುವುದರ ಮೂಲಕ ತಮ್ಮದೆ ಕೊಡುಗೆಯನ್ನು ನೀಡಿದ್ದಾರೆ.
ಶಾಲಾ ದತ್ತು ಪಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಿಷಬ್ ಶೆಟ್ಟಿ ಅವರು ಇವೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಅಭಿಪ್ರಾಯವನ್ನು ಹಂಚಿಕೊಳ್ಳಲು ಸಿಕ್ಕಿದ ಅವಕಾಶಕ್ಕೆ ಧನ್ಯವಾದವನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಬಿ.ಎಸ್ ಸುರೇಶ ಶೆಟ್ಟಿ,ವಕೀಲರಾದ ಪ್ರಸನ್ನ ಕುಮಾರ್ ಶೆಟ್ಟಿ,ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್,ಕೆರಾಡಿ ಪಂಚಾಯತ್ ಅಧ್ಯಕ್ಷ ಸುದರ್ಶನ ಶೆಟ್ಟಿ,ಎಸ್‍ಡಿಎಂಸಿ ಅಧ್ಯಕ್ಷರು,ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…