ಕುಂದಾಪುರ

ಹುಟ್ಟೂರಿನ ಶಾಲೆ ದತ್ತು ಪಡೆದ ನಟ ನಿರ್ದೇಶಕ ರಿಷಬ್ ಶೆಟ್ಟಿ

Share

ಕುಂದಾಪುರ:ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ತಾನು ಓದಿರುವ ಹೂಟ್ಟುರು ಶಾಲೆಯನ್ನು ಐದು ವರ್ಷಗಳ ಅವಧಿ ವರೆಗೆ ದತ್ತು ತೆಗೆದುಕೊಳ್ಳುವುದರ ಮುಖೇನ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ಕನ್ನಡ ಸಿನೆಮಾ ರಂಗದಲ್ಲಿ ತನ್ನದೇ ಛಾಪು ಮೂಡಿಸಿ ಮನೆ ಮಾತಾಗಿರುವ ರಿಷಬ್ ಶೆಟ್ಟಿ ಅವರು ತನ್ನ ತವರಿನಲ್ಲಿರುವ ಕೆರಾಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ. ಸಮೃದ್ಧ ಬೈಂದೂರು ಅಭಿವೃದ್ಧಿಗೆ ಕೈ ಜೋಡಿಸುಡಿಸುತ್ತಿರುವ ರಿಷಬ್ ಶೆಟ್ಟಿ ಅವರು ತಾನು ಕಲಿತ ಶಾಲೆಯನ್ನು ದತ್ತು ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಒತ್ತನ್ನು ನೀಡುವುದರ ಮೂಲಕ ತಮ್ಮದೆ ಕೊಡುಗೆಯನ್ನು ನೀಡಿದ್ದಾರೆ.
ಶಾಲಾ ದತ್ತು ಪಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಿಷಬ್ ಶೆಟ್ಟಿ ಅವರು ಇವೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಅಭಿಪ್ರಾಯವನ್ನು ಹಂಚಿಕೊಳ್ಳಲು ಸಿಕ್ಕಿದ ಅವಕಾಶಕ್ಕೆ ಧನ್ಯವಾದವನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಬಿ.ಎಸ್ ಸುರೇಶ ಶೆಟ್ಟಿ,ವಕೀಲರಾದ ಪ್ರಸನ್ನ ಕುಮಾರ್ ಶೆಟ್ಟಿ,ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್,ಕೆರಾಡಿ ಪಂಚಾಯತ್ ಅಧ್ಯಕ್ಷ ಸುದರ್ಶನ ಶೆಟ್ಟಿ,ಎಸ್‍ಡಿಎಂಸಿ ಅಧ್ಯಕ್ಷರು,ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago