ಕುಂದಾಪುರ

ಸರಕಾರಿ ಕಿರಿಯ ಪ್ರಾಥಮಿಕ ಹೊಸಬಾಳು ಶಾಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಭ್ರಮಾಚರಣೆ

Share

ಕುಂದಾಪುರ:ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮದ ಹೊಸಬಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳ್ಳಿ ಬೆಳಕು, ಸಾಂಸ್ಕøತಿಕ ಸೌರಭ ಕಾರ್ಯಕ್ರಮ ಅದ್ಧೂರಿಯಾಗಿ ಬುಧವಾರ ನಡೆಯಿತು.

ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಅನುವಂಶಿಕ ಮೊಕ್ತೇಸರರಾದ ಎಸ್.ಸಚ್ಚಿದಾನಂದ ಚಾತ್ರ ಅವರು ಬೆಳ್ಳಿ ಬೆಳಕು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ದಾನ,ಧರ್ಮ ಮಾಡಿಕೊಂಡು ಉಪಕಾರ ಮನೋಭಾವದಿಂದ ಬಾಳ್ವೆ ಮಾಡಿದಾಗ ಮಾತ್ರ ನಮ್ಮ ಹೆಸರು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು.ಶಾಲೆಯ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಕೈಲಾದಷ್ಟು ಸಹಾಯ ಮಾಡಲಾಗುವುದು ಎಂದರು.

ಹೊಸಬಾಳು ಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ.ಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ತೆಂಗಿನ ಗರಿ ಮಾಡಿನೊಂದಿಗೆ ಆರಂಭಗೊಂಡ ನಮ್ಮ ಈ ಶಾಲೆ  ಇಂದು ರಜತ ಮಹೋತ್ಸವ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದೆ.ಈ ಭಾಗದ ಪುಟ್ಟ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂಗನವಾಡಿ ಕೇಂದ್ರವನ್ನು ತೆರೆಯಲಾಗಿದ್ದು, ಶಾಲೆಗೆ ಕೊಠಡಿಗಳ ಕೊರತೆ ಸಹಿತ ಶಾಲಾ ಆವರಣ ಗೋಡೆ, ಬಾಲಭವನ ನಿರ್ಮಾಣ ಹಾಗೂ ಶಾಲೆಗೊಂದು ಪ್ರಾಜೆಕ್ಟರ್ ಅವಶ್ಯಕತೆ ಇದೆ ಎಂದು ಹೇಳಿದರು.ಶಾಲಾಭಿವೃದ್ದಿಗೆ ದಾನಿಗಳು ಗ್ರಾಮಸ್ಥರು ಸಹಕರಿಸಬೇಕೆಂದರು.

ಹಳ್ಳಿಹೊಳೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರದೀಪ್ ಕೊಠಾರಿ ಮಾತನಾಡಿ, ಸರಕಾರಿ ಜಾಗ ಆಗಿದ್ದರು ಕೂಡ ಅರಣ್ಯ ಇಲಾಖೆ ತಕರಾರಿ ನಿಂದ ಇನ್ನೂ ಕೂಡ ಶಾಲೆ ಹೆಸರಿಗೆ ಜಾಗ ರೆಕಾರ್ಡ್ ಆಗಿಲ್ಲ,ಎಲ್ಲಾ ರೀತಿಯ ಸಮಸ್ಯೆಗಳನ್ನು ಬಗೆಹರಿಸಿ ಶಾಲೆಯ ಹೆಸರಿಗೆ ಜಾಗ ರೆಕಾರ್ಡ್ ಆಗುವಂತೆ ಶಾಸಕರು ಗಮನ ಹರಿಸಬೇಕು ಎಂದರು.

ಹೊಸಬಾಳು ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಳ್ಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಶೆಟ್ಟಿ ಮಾತನಾಡಿ, ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಚಟುವಟಿಕೆ ಹೆಚ್ಚಿಸಲು ಆಟೋಟ ಮತ್ತು ಮನೋರಂಜನಾ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿ ಆಗುತ್ತದೆ.ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ನಿಂದ ಸುಮಾರು 12 ಲಕ್ಷ.ರೂ ವೆಚ್ಚದಲ್ಲಿ ಶಾಲೆಯ ಅಭಿವೃದ್ಧಿಯನ್ನು ಮಾಡಲಾಗಿದೆ.ಬಾಕಿ ಉಳಿದ ಅಭಿವೃದ್ಧಿ ಕಾರ್ಯಗಳಿಗೆ ದಾನಿಗಳು ಗ್ರಾಮಸ್ಥರು ಸಹಕರಿಸಬೇಕೆಂದರು.

ಹೊಸಬಾಳು ಶಾಲೆಯ ಎಸ್.ಡಿ ಎಂ.ಸಿ ಅಧ್ಯಕ್ಷ ಶೇಖರ ಕಟ್ಟಿನಾಡಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಮಂಡಳಿ ಸದಸ್ಯ ಜಯಾನಂದ ಹೋಬಳಿದಾರ್,ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಬಾಲಚಂದ್ರ ಭಟ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ಶೇಖರ ಪೂಜಾರಿ, ನಿವೃತ್ತ ಶಿಕ್ಷಕ ಹಳ್ಳಿಹೊಳೆ ಚಕ್ರೇಶ್ ಯಡಿಯಾಳ,ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಂಕರನಾರಾಯಣ ಯಡಿಯಾಳ,ಉಪ ವಲಯ ಅರಣ್ಯಾಧಿಕಾರಿ ಸಿದ್ಧಾಪುರ ವನ್ಯಜೀವಿ ವಿಭಾಗ ನಿಂಗಪ್ಪ ವಾಲಿ, ನಾರಾಯಣ ಪೂಜಾರಿ ಹಳ್ಳಿಬೈಲು,ಶಂಕರ ಕುಲಾಲ ಹಳ್ಳಿಬೈಲು, ನಾರಾಯಣ ಚಾತ್ರ ಹಳ್ಳಿಬೈಲು,ಸೋಮ ಪೂಜಾರಿ,ತಿಮ್ಮ ಕಟ್ಟಿನಾಡಿ, ರಂಗ ಕಬ್ಬಿನಾಲೆ,ಶಿವರಾಮ ಪೂಜಾರಿ ಹಳ್ಳಿಬೈಲು, ಕ್ಷೇತ್ರ ಸಮನ್ವಯಾಧಿಕಾರಿ ಬೈಂದೂರು ಮಂಜುನಾಥ್ ನಾಯ್ಕ್, ಶಿಕ್ಷಣ ಸಂಯೋಜಕ ಸತ್ಯನಾರಾಯಣ ಕೊಡೇರಿ,ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಶಿವರಾಮ ಕುಲಾಲ್, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಉಪಸ್ಥಿತರಿದ್ದರು.

ಎಸ್ಡಿಎಂಸಿ ಅಧ್ಯಕ್ಷ ಶೇಖರ ಕಟ್ಟಿನಾಡಿ ವಂದಿಸಿದರು.ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು, ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು, ಬಿಸಿಯೂಟ ಸಹಾಯಕರನ್ನು ಗೌರವಿಸಲಾಯಿತು.ನಾನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಹಳ್ಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಶೆಟ್ಟಿ ಧ್ವಜಾರೋಹಣ ನೆರವೇರಿಸಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago