ಕುಂದಾಪುರ:ಕೊಬ್ಬರಿ ಧಾರಣೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಘೋಷಣೆ ಮಾಡಿರುವುದರಿಂದ ಕರಾವಳಿ ಸಹಿತ ದೇಶದ ತೆಂಗು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯು ದೇಶದ ತೆಂಗು ಬೆಳೆಗಾರರ ಸಂಕಷ್ಟವನ್ನು ಅರಿತು ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತನ್ನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿದೆ. ಮೋದಿ ಸರ್ಕಾರದ ಈ ನಿರ್ಧಾರದಿಂದ.ಕೇಂದ್ರ ಸರ್ಕಾರ ಗಿರಣಿ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತೀ ಕ್ವಿಂಟಾಲ್‍ಗೆ 300 ರೂಪಾಯಿ ಹಾಗೂ ಉಂಡೆ ಕೊಬ್ಬರಿಯ ಎಂಎಸ್‍ಪಿಯನ್ನು ಕ್ವಿಂಟಾಲ್‍ಗೆ 250 ರೂಪಾಯಿಗೆ ಏರಿಕೆ ಮಾಡಿದೆ.ಇದರೊಂದಿಗೆ 2024ನೇ ಋತುವಿಗೆ ಮಿಲ್ಲಿಂಗ್ ಕೊಬ್ಬರಿಯ ಕನಿಷ್ಠ ಬೆಲೆಯು ಕ್ವಿಂಟಾಲ್‍ಗೆ 11,160 ರೂಪಾಯಿಗಳಿಗೆ ಹೆಚ್ಚಳಗೊಂಡಿದೆ.ಇದೇ ವೇಳೆ ಉತ್ತಮ ಗುಣಮಟ್ಟದ ಉಂಡೆ ಕೊಬ್ಬರಿಯ ಬೆಲೆ 12,000 ರೂಪಾಯಿಗಳಿಗೆಗೆ ಏರಿಕೆಯಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…