ಕುಂದಾಪುರ

ಜ.20,21 ರಂದು ಕಂಚುಗೋಡು ಶಾಲೆ ಅಮೃತ ಮಹೋತ್ಸವ

Share

ಕುಂದಾಪುರ:ಅಮೃತ ಮಹೋತ್ಸವ ಕಾರ್ಯಕ್ರಮ ಎನ್ನುವುದು ಕೇವಲ ಸಂಭ್ರಮಕ್ಕೆ ಮಾತ್ರ ಸೀಮಿತವಾಗದೆ ಶಾಲಾಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕಂಚುಗೋಡು ಶಾಲೆಯಲ್ಲಿ ಶನಿವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಶಾಲಾ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಾಲಾ ವಾಹನದ ವ್ಯವಸ್ಥೆ ಸಹಿತ ಸ್ಮಾರ್ಟ್ ಕ್ಲಾಸ್ ನಿರ್ಮಾಣ,ಇಂಗ್ಲಿಷ್ ಸ್ಪಿಕಿಂಗ್ ಕ್ಲಾಸ್,ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ,ವಿದ್ಯಾನಿಧಿ ಯೋಜನೆ ಹಾಗೂ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಟಿಯಲ್ಲಿ ಎಲ್.ಕೆ.ಜಿ,ಯು.ಕೆ.ಜಿ ತರಗತಿ ಆರಂಭಿಸುವ ಚಿಂತನೆಯನ್ನು ಮಾಡಲಾಗಿದ್ದು ಎಲ್ಲಾ ಯೋಜನೆಗಳನ್ನು ಅಮೃತ ಮಹೋತ್ಸವ ಕಾರ್ಯಕ್ರಮದ ಮುಖೇನ ಹಮ್ಮಿಕೊಳ್ಳಲಾಗಿದೆ ಎಂದರು.ವಿದ್ಯಾಭಿಮಾನಿಗಳು,ದಾನಿಗಳು ಸಹಕಾರ ನೀಡಬೇಕೆಂದು ವಿನಂತಿಸಿಕೊಂಡರು.
ಹಳೆ ವಿದ್ಯಾರ್ಥಿ ಸಂಘದ ಸಂಘದ ಕೋಶಾಧಿಕಾರಿ ಹರೀಶ್ ಖಾರ್ವಿ ಮಾತನಾಡಿ,1948 ರಲ್ಲಿ ಆರಂಭಗೊಂಡ ಕಂಚುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2024 ರಲ್ಲಿ 75 ವರ್ಷಗಳು ತುಂಬಲಿದೆ.ಅಮೃತ ಮಹೋತ್ಸವ ಕಾರ್ಯಕ್ರಮ ಒಂದೆ ವಿಷಯವಲ್ಲದೆ ಸರಕಾರಿ ಶಾಲೆಯನ್ನು ನಮ್ಮ ಭಾಗದಲ್ಲಿ ಉಳಿಸಿಕೊಳ್ಳುವ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಲ್ಲರೂ ಸಹಕಾರ ನೀಡಬೇಕೆಂದರು.
ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ.ಎಂ ಮಾತನಾಡಿ,ಹಳೆ ವಿದ್ಯಾರ್ಥಿ ಸಂಘ ಮತ್ತು ಎಸ್‍ಡಿಎಂಸಿ ಸದಸ್ಯರ ಅವಿತರ ಶ್ರಮದಿಂದ ಶಾಲೆಯಲ್ಲಿ ಹಾಜರಾತಿ ಪ್ರಮಾಣವೂ ಅಧಿಕಗೊಂಡಿದೆ ಎಂದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ವಿಮಲಾ ಸುರೇಶ್ ನಾಯಕ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚೌಕಿ ಅಖೋಕ ಖಾರ್ವಿ ಮತ್ತು ಕಾರ್ಯದರ್ಶಿ ಕೃಷ್ಣ ಪಟೇಲ್,ಸಂಘಟನಾ ಕಾರ್ಯದರ್ಶಿ ರಮೇಶ್ ಖಾರ್ವಿ,ಅಮೃತ ಮಹೋತ್ಸವ ಸಮಿತಿ ಕೋಶಾಧಿಕಾರಿ ಪ್ರದೀಪ ಪೂಜಾರಿ,ಸುಖಪಾಲ್ ಖಾರ್ವಿ,ನಾಗರಾಜ,ದಿವಾಕರ,ಆಶಾ ಕಾರ್ಯಕರ್ತೆ ಪ್ರೇಮ ಭಂಡಾರಿ ಉಪಸ್ಥಿತರಿದ್ದರು.ಜನವರಿ 20,21 ರಂದು ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago