ಉಡುಪಿ:ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿ ಕಡಲ ತೀರದಲ್ಲಿ ವಿಹಾರ ಮಾಡಿರುದನ್ನು ಅಣುಕಿಸಿ ಕಾಲು ಕೆರೆದು ಕೊಂಡು ಖ್ಯಾತೆ ತೇಗಿದ್ದ ಮಾಲ್ಡೀವ್ಸ್ ದೇಶಕ್ಕೆ ತಿರುಗೇಟು ನೀಡಿರುವ ಕ್ರಿಕೆಟ್ ಲೋಕದ ತಾರೆ ವಿರೇಂದ್ರ ಸೆಹ್ವಾಗ್ ಅವರು ಉಡುಪಿ ಜಿಲ್ಲೆಯ ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್ನ ಫೋಟೋ ಅನ್ನು ಸಾಮಾಜಿಕ ಜಾಲಾತಾಣದಲ್ಲಿ ಪೆÇಸ್ಟ್ ಮಾಡುವುದರ ಮುಖೇನ ಬೀಚ್ನ ಸೌಂದರ್ಯವನ್ನು ಹಾಡಿ ಹೊಗಳಿದ್ದಾರೆ.ಭಾರತೀಯರು ಭಾರತ ದೇಶದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವಂತೆ ಕರೆ ನೀಡಿದ್ದಾರೆ.
ದೇಶದ ಜನಪ್ರಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಮತ್ತು ಭಾರತ ದೇಶದ ಟೂರಿಸಂ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಲ್ಡೀವ್ಸ್ ಸರಕಾರದ ಕ್ಯಾಬಿನೆಟ್ ದರ್ಜೆ ಸಚಿವರ ವಿರುದ್ಧ ಕೆರಳಿದ ಸೆಲೆಬ್ರೆಟಿಗಳು ಹಾಗೂ ಭಾರತೀಯರು ಬೈಕಾಟ್ ಮಾಲ್ಡೀವ್ಸ್ ಎಂದು ಅಭಿಯಾನವನ್ನು ಈಗಾಗಲೇ ಆರಂಭಿಸಿದ್ದಾರೆ.ಭಾರತೀಯರ ಪ್ರತಿಕ್ರಿಯೆ ತತ್ತರಿಸಿದ ಮಾಲ್ಡೀವ್ಸ್ ಸರಕಾರ ತನ್ನ ಮೂವರು ಸಚಿವರನ್ನು ವಜಾಗೊಳಿಸಿ ಕ್ಷಮೆಯನ್ನು ಕೂಡ ಯಾಚಿಸಿದೆ.
ಅರಬ್ಬಿ ಸಮುದ್ರ ಹಾಗೂ ಸೌಪರ್ಣಿಕಾ ನದಿ ತೀರ ಪ್ರದೇಶವನ್ನು ಹೊಂದಿರುವ ತ್ರಾಸಿ-ಮರವಂತೆ ಬೀಚ್ ನಡುವೆ ಸುಮಾರು 2.5 ಕಿ.ಮೀ ವರೆಗೆ ರಾಷ್ಟ್ರೀಯ ಹೆದ್ದಾರಿ-66 ಹಾದು ಹೋಗಿದೆ.ತನ್ನ ಅದಮ್ಯ ಸೌಂದರ್ಯದಿಂದಲೇ ಕಣ್ಣ್ ಮನ ಸೆಳೆಯುವ ವಿಶ್ವಪ್ರಸಿದ್ಧ ತ್ರಾಸಿ ಮರವಂತೆ ಬೀಚ್ನ ಸೌಂದರ್ಯಕ್ಕೆ ಮನಸೋತವರೆ ಇಲ್ಲಾ.ನೀಲಿ ಬಣ್ಣದೊಂದಿಗೆ ಕಂಗೊಳಿಸುತ್ತಿರುವ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್ಗೆ ಸೆಹ್ವಾಗ್ ಫೀದಾ ಆಗಿದ್ದಾರೆ.
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…