ಕುಂದಾಪುರ:ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನವೆಂಬರ್ 2023ರಲ್ಲಿ ನೆಡೆಸಿದ ಸಿಎ ಫೈನಲ್ ಮತ್ತ ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಯಾದ ಷಣ್ಮುಖ ಕೆ. ಎಸ್.(256)ಸಿಎ ಅಂತಿಮ ಪರೀಕ್ಷೆಯನ್ನು ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರ ಹೊಮ್ಮಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಧನುಷ್ 518 ಅಂಕ ಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದುವುದರ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಆಯೆಷಾ ತುಬಾ(260), ವೈಷ್ಣವಿ ಶೆಟ್ಟಿ (249), ಅಮೃತ (234),ಕೆ.ಆರ್.ದೀಕ್ಷಾ (228)ಅಂಕ ಗಳೊಂದಿಗೆ ಸಿಎ ಇಂಟರ್ಮೀಡಿಯೆಟ್ ದ್ವಿತೀಯ ಗ್ರೂಪ್ ಪರೀಕ್ಷೆಯನ್ನು ತೇರ್ಗಡೆ ಹೊಂದುದರ ಮೂಲಕ ಸಿಎ ಅಂತಿಮ ಹಂತಕ್ಕೆ ಪ್ರವೇಶಪಡೆದಿದ್ದಾರೆ.ಶೃದ್ಧಾ ಬಿ. ಸಾಲ್ಯಾನ್(270),ಪಂಚಮಿ ಕಿಣಿ (261),ರಕ್ಷಿತಾ (235), ಸುದೀಪ್‌ರಾಜ್(227),ಕಿಶನ್ ಅಡಿಗ (216), ವೈಷ್ಣವಿ ವಿ. ಮೊಪಗಾರ್ (216), ರೋಹಿತ್ ಆಚಾರ್ಯ(210), ಸುಶ್ಮಿತಾ ಉದಯ್ ಪೂಜಾರಿ (203), ಮತ್ತು ಶ್ರೀಜಿತ್(200) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಮೋದಲ ಗ್ರೂಪ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶಿಕ್ಷ ಪ್ರಭ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಿಎ ಮತ್ತು ಸಿಎ ಪ್ರೊಫೆಷನಲ್ ಕೋರ್ಸ್ ಗಳಿಗೆ
ಗುಣ ಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ಎಲ್ಲಾ ಹಂತದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ.
ಸಂಸ್ಥೆಯಲ್ಲಿ ಬೋಧಕ ಸಿಬ್ಬಂದಿ ಗಳಾಗಿ ಆಗಮಿಸುವ ಅನುಭವಿ ಲೆಕ್ಕಪರಿಶೋಧಕರು,ತರಬೇತು ದಾರರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮ ಪ್ರತಿಬ್ಯಾಚ್‌ನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಯಿತು. ಬೋಧಕ ಸಿಬ್ಬಂಧಿವರ್ಗದವರಿಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.
“ದೇವರ ಅನುಗ್ರಹ, ತಂದೆ ತಾಯಿಯ ನಿರಂತರ ಪ್ರೋತ್ಸಾಹ, ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಜೀವನದಲ್ಲಿ ಗುರಿ ಹಾಗೂ ಅದನ್ನು ಸಾಧಿಸುವ ಛಲ ಇದ್ದರೆ ಯಶಸ್ಸು ತಾನಾಗಿಯೇ ಒಲಿಯುತ್ತದೆ.”
ಸಿಎಅಂತಿಮ ಪರೀಕ್ಷೆಉತ್ತೀರ್ಣವಿದ್ಯಾರ್ಥಿ
ಷಣ್ಮುಖ ಕೆ. ಎಸ್. ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…