ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಶ್ರೀಕ್ಷೇತ್ರ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ಜ.16 ಮತ್ತು ಜ.17 ರಂದು ನಡೆಯಲಿದೆ.ಜ.14 ರಂದು ಸಂಕ್ರಾತಿ ಪೂಜೆ ನೆರವೇರಲಿದೆ.ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಅಂಗವಾಗಿ ಜ.16 ರಂದು ಮಂಗಳವಾರ ಬೆಳಿಗ್ಗೆ ಗಣಪತಿ ಪ್ರಾರ್ಥನೆ,ನವಕಲಶಾಭಿಷೇಕ,10.30 ರಿಂದ ಮಡೆ ಪ್ರದಕ್ಷಿಣೆ,ಶ್ರೀನಾಗ ದರ್ಶನ,ಬ್ರಾಹ್ಮಣ ಸಂತರ್ಪಣೆ ಸಂಜೆ 4ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಸೇವೆ ಜರುಗಲಿದೆ.ಜ.17 ರಂದು ಬುಧವಾರ ಬೆಳಿಗ್ಗೆ 6 ಗಂಟೆಗೆ ಹಾಲಿಟ್ಟು ಸೇವೆ.9.30ಕ್ಕೆ ನಾಗಮಂಡಲೋತ್ಸವ,ಬೆಳಿಗ್ಗೆ 11 ರಿಂದ ತುಲಾಭಾರ ಸೇವೆ ಸೇವೆ ಜರುಗಲಿದೆ.ಹಣ್ಣುಕಾಯಿ,ಮಂಗಳಾರತಿ ಸೇವೆ,ಹರಿವಾಣ ನೈವೇದ್ಯ,ಹರಕೆ ಸೇವೆ ನಡೆಯಲಿದೆ ಎಂದು ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಅರುಣಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…