ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು
ಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಹಣ್ಣುಕಾಯಿ ಸೇವೆ ಹಾಗೂ ಹರಕೆ ಸೇವೆ,ಪ್ರಧಾನಹೋಮ,ನವಕಲಶಾಭಿಷೇಕ,ಕಲಶಾಭಿಷೇಕ,ಹರಿವಾಣ ನೆವೇದ್ಯ ಸೇವೆ,ಮಡೆ ಪ್ರದಕ್ಷಿಣೆ,ಶ್ರೀನಾಗದರ್ಶನ,ಬ್ರಾಹ್ಮಣ ಸಂತರ್ಪಣೆ ಮತ್ತು ಸಾರ್ವಜನಿಕ ಪ್ರಸಾದ ವಿತರಣೆ,ಗಣಪತಿ ಪ್ರಾರ್ಥನೆ ಜರುಗಿತು.ಕುಂದಾಪುರ ಮತ್ತು ಬೈಂದೂರು ತಾಲೂಕಿನ ಜನರು ಸೇರಿದಂತೆ ಘಟ್ಟದ ಮೇಲಿನ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು,ಕಷ್ಟ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ತೀರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ,ಅಭಿನಂದನ್ ಶೆಟ್ಟಿ,ಅರ್ಚಕರು,ಗ್ರಾಮಸ್ಥರು,ಸ್ವಯಂಸೇವಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಸುಬ್ರಹ್ಮಣ್ಯ ದೇವ -ಮಡೆ ಪ್ರದಕ್ಷಿಣೆ
ಕುಂದಾಪುರ ತಾಲೂಕಿನ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಅಂಗವಾಗಿ ಮಡೆ ಪ್ರದಕ್ಷಿಣೆ ಮಂಗಳವಾರ ನಡೆಯಿತು.ಸಂಕಷ್ಟದ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ಭಕ್ತರು ಸಲ್ಲಿಕೆ ಮಾಡಿದರು.
ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಅಂಗವಾಗಿ ಶ್ರೀಸುಬ್ರಹ್ಮಣ್ಯ ದೇವರ ಬೆಳ್ಳಿ ಮೂರ್ತಿಯ ಉತ್ಸವ ಸೇವೆ ಮಂಗಳವಾರ ನಡೆಯಿತು.ಈ ಸದಂರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.
ನಾಳೆ ನಾಗಮಂಡಲ ಸೇವೆ:ಎರಡನೇ ದಿನದ ಷಷ್ಠಿ ಮಹೋತ್ಸವ ಅಂಗವಾಗಿ ಬುಧವಾರ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹಾಲಿಟ್ಟು ಸೇವೆ,ನಾಗಮಂಡಲ ಸೇವೆ,ತುಲಾಭಾರ ಸೇವೆ,ಮಂಗಳಾರತಿ,ಹಣ್ಣುಕಾಯಿ,ಹರಿವಾಣ ನೈವೇದ್ಯ ಸೇವೆ ನಡೆಯಲಿದೆ.
ಶ್ರೀಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನ ಗುಡ್ಡಮ್ಮಾಡಿ ಅನುಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ ಮಾತನಾಡಿ,ಕರಾವಳಿ ಭಾಗದಲ್ಲಿ ಬಹಳಷ್ಟು ಖ್ಯಾತಿಯನ್ನು ಹೊಂದಿರುವ ಸಂತಾನಕಾರಕನೆಂದೆ ಪ್ರಸಿದ್ಧಿ ಪಡೆದಿರುವ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿದೆ.ಚರ್ಮ ರೋಗ ನಿವಾರಣೆ,ಸಂತಾನ ಭಾಗ್ಯಕ್ಕಾಗಿ,ಜೀವನದ ಶ್ರೇಯಸ್ಸಿಗಾಗಿ ಹೇಳಿಕೊಂಡ ಹರಕೆಯನ್ನು ಭಕ್ತರು ಸಲ್ಲಿಕೆಮಾಡಿದ್ದಾರೆ.ಶ್ರೀಸುಹ್ಮಣ್ಯ ದೇವರು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಹಾರೈಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…