ಶೃಂಗೇರಿ ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ

ಕುಂದಾಪುರ:ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಾರ್ಷಿಕ ವಧರ್ಂತ್ಯುತ್ಸವ ಮತ್ತು ಪರಮಪೂಜ್ಯ ದಕ್ಷಿಣಾಮ್ನಾಯ ಶೃಂಗೇರಿ ಶಾರದ ಪೀಠಾಧೀಶ್ವರರಾದ ಶ್ರೀ ಜಗದ್ಗುರು ವಿಧುಶೇಖರ ಭಾರತೀ ಸ್ವಾಮಿಗಳವರ ಅಡ್ಡ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.
ಪರಮಪೂಜ್ಯ ದಕ್ಷಿಣಾಮ್ನಾಯ ಶೃಂಗೇರಿ ಶಾರದ ಪೀಠಾಧೀಶ್ವರರಾದ ಶ್ರೀ ಜಗದ್ಗುರು ವಿಧುಶೇಖರ ಭಾರತೀ ಸ್ವಾಮಿಗಳನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿಕೊಳ್ಳಲಾಯಿತು.ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ ನಗರ ಮಹಾಂಕಾಳಿ ದೇವಸ್ಥಾನದಿಂದ ಬಂದರಿನ ಬಸ್ ನಿಲ್ದಾಣ ವರೆಗೆ ಸಾಗಿ ತದ ನಂತರ ಗಂಗೊಳ್ಳಿ ರಾಜ ಬೀದಿಯ ಮೂಲಕ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.
1975 ರಲ್ಲಿ ಶೃಂಗೇರಿ ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ ಪ್ರಥಮ ಬಾರಿಗೆ ಗಂಗೊಳ್ಳಿಯಲ್ಲಿ ನಡದಿತ್ತು,49 ವರ್ಷಗಳ ಬಳಿಕ 2024 ರಲ್ಲಿ ಎರಡನೇ ಬಾರಿಗೆ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ನಡೆದಿದೆ.



















































































































































































































































































































































































































































































































































































































































































































































































































































































































































































































































































































































































































































































































































































































































































