ಕುಂದಾಪುರ:ಸರಕಾರಿ ಶಾಲೆಗಳ ಏಳಿಗೆಗೆ ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾದದ್ದು ಶಾಲೆ ಮೇಲಿನ ಪ್ರೀತಿ ಹೆಚ್ಚಾದಾಗ ಮಾತ್ರ ಕನ್ನಡ ಶಾಲೆಗಳು ಉಳಿಯಲು ಸಾಧ್ಯವಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಹಳೆ ವಿದ್ಯಾರ್ಥಿಗಳ ಸಂಘ ಕೋಟೆಗುಡ್ಡೆ (ಪಡುಕೋಣೆ ಶಾಲೆ) ಸಹಕಾರದಿಂದ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಡುಕೋಣೆ ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಡಾ.ವಿಜಯಕೃಷ್ಣ ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ರಾಜಕೀಯ ವಿಚಾರವನ್ನು ಶಾಲೆಯಿಂದ ಹೊರಗೆ ಇಟ್ಟು ಊರಿನ ಶಾಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ಅಧ್ಯಕ್ಷತೆ ವಹಿಸಿದ್ದರು.ಉದ್ಯಮಿಗಳಾದ ನಾಗರಾಜ.ಡಿ ಪಡುಕೋಣೆ,ಹರ್ಷ ಕಾಮತ್,ನಾಗೇಂದ್ರ ಹೆಬ್ಬಾರ್ ಪಟೇಲರಮನೆ ಹಡವು,ಎಸ್‍ಡಿಎಂಸಿ ಅಧ್ಯಕ್ಷ ದಿನೇಶ್ ಪೂಜಾರಿ,ವಿ.ವಿ ಪಡುಕೋಣೆ ರಮೇಶ ಬಂಗೇರ,ಸಂಜಯ.ಕೆ ಪೂಜಾರಿ,ಪಂಚಾಯಿತಿ ಸದಸ್ಯ ಸುಧಾಕರ ಶೆಟ್ಟಿ,ರಾಮಚಂದ್ರ ಹೆಬ್ಬಾರ್,ಸಿಆರ್‍ಪಿ ಮಂಜುನಾಥ ನಾಯ್ಕ್,ಶಿಕ್ಷಣ ಸಂಯೋಜಕ ಯೋಗೀಶ್,ನಾಗರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ನಿವೃತ್ತ ಅಧ್ಯಾಪಕ ಸುಬ್ರಾಯ ಗಾಣಿಗ ಮತ್ತು ನಿವೃತ್ತ ಸೈನಿಕರಾದ ದಿನೇಶ್ ಆಚಾರ್ಯ,ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಕಸ್ತೂರಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಶಿಕ್ಷಕರಾದ ಸರಿಟಾ ಪಾಯಸ್,ದೀಪಾ ಶೆಟ್ಟಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.ವಿಶ್ವನಾಥ ಪಡುಕೋಣೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕರಾದ ಮಾಲತಿ ಆಚಾರ್ಯ,ಪ್ರಶಾಂತ ನಿರೂಪಿಸಿದರು.ಅಶೋಕ ಶೆಟ್ಟಿ ಸಂಸಾಡಿ ಬಹುಮಾನ ವಿತರಿಸಿದರು.ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ ಪಡುಕೋಣೆ ವಂದಿಸಿದರು.ಶಾಲಾ ವಿದ್ಯಾರ್ತಿಗಳಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…