ಕುಂದಾಪುರ:ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹೊಸಾಡು ಗ್ರಾಮದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿದ್ದಾರೆ.
ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆಮಕ್ಕಿ ಕ್ರಾಸ್ ನಿಂದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸುಮಾರು 1 ಕಿ.ಮೀ ವರೆಗಿನ ಮಣ್ಣಿನ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಕಳೆದ 6 ವರ್ಷಗಳಿಂದ ಕಾಲೋನಿ ನಿವಾಸಿಗಳು ನೀಡಿರುವ ಹಲವು ಮನವಿಗಳಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದನೆ ಮಾಡದೆ ಇದ್ದಿದ್ದರಿಂದ ಬೇಸತ್ತ ನಾಗರಿಕರು ಮುಂಬರುವ ಲೋಕಸಭೆಯನ್ನು ಬಹಿಷ್ಕರಿಸುವ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿ ತಮ್ಮ ಅಸಹನೆಯನ್ನು ಹೊರಗೆ ಹಾಕಿದ್ದಾರೆ.ರಸ್ತೆ ಅಭಿವೃದ್ದಿಗೊಳಿಸದೆ ಹೋದರೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಹೊಸಾಡು ಗ್ರಾ.ಪಂ ಮಾಜಿ ಸದಸ್ಯ ಸೀತಾರಾಮ ಶೆಟ್ಟಿ,ರಾಮಣ್ಣ,ಅವಿನಾಶ್,ಲಚ್ಚು,ಸುಶೀಲ,ಮಾಲತಿ,ನರಸಿಂಹ,ವಿವೇಕ,ರಸಿಕ,ಅಭಿಷೇಕ,ಸುಭಾಷ್,ನೇತ್ರಾ,
ದಿನೇಶ,ಗುಲಾಬಿ,ರಾಮು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…