ಹೊಸೂರು ಪ್ರೌಢಶಾಲೆ: ಸೈಕಲ್ ಸ್ಟ್ಯಾಂಡ್,ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಕುಂದಾಪುರ: ಹೊಸೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನೂತನವಾಗಿ ನಿರ್ಮಿಸಿದ ಸೈಕಲ್ ಸ್ಟ್ಯಾಂಡ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.ಮಾಜಿ ಆಡಳಿತ ಮಂಡಳಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿಯವರು ನೂತನವಾಗಿ ನಿರ್ಮಿಸಿರುವ ಸೈಕಲ್ ಸ್ಟ್ಯಾಂಡ್ ಅನ್ನು ಉದ್ಘಾಟಿಸಿದರು.ಮಾಜಿ ಆಡಳಿತ ಮಂಡಳಿ ಸದಸ್ಯ ಸಬ್ಲಾಡಿ ಮಂಜಯ್ಯ ಶೆಟ್ಟಿ ಮತ್ತು ಮಾಜಿ ಆಡಳಿತ ಮಂಡಳಿ ಸದಸ್ಯರಾದ ಡಾ.ಅತುಲ್ ಕುಮಾರ ಶೆಟ್ಟಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಶುಭಹಾರೈಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಯದಾನಿಗಳಾದ ಕೃಷ್ಣಮೂರ್ತಿ ಮಂಜರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ವಂಡಬಳ್ಳಿ ಜಯರಾಮ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಲೆಮಹಾ ಪೋಷಕರಾದ ಶಿವರಾಮ ಶೆಟ್ಟಿ ದೇವಲ್ಕುಂದ, ಚಂದ್ರಶೇಖರ್ ಶೆಟ್ಟಿ, ಕಾನ್ ಬೇರು,ದಿನಕರ ಶೆಟ್ಟಿ ನಿಡೂಟ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೆ ಎಲ್ ಜಯರಾಮ್ ಶೆಟ್ಟಿ ಕಾನ್ ಬೇರು,ನಿವೃತ್ತ ಮುಖ್ಯೋಪಾಧ್ಯಾಯ ಚಂದ್ರ ಶೆಟ್ಟಿ,ಪಂಚಾಯತ್ ಸದಸ್ಯರು ಗಳಾದ ಅಶೋಕ ಕುಮಾರ್ ಶೆಟ್ಟಿ ದೇವಲ್ಕುಂದ, ರಾಘವೇಂದ್ರ ಪೂಜಾರಿ,ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಹೊಸೂರು ಹಾಗೂ ದಾಮೋದರ್ ಶರ್ಮ,ಕೆರಾಡಿ ಗ್ರಾಮ ಪಂಚಾಯತ್ ಸದಸ್ಯ ಸಂದೀಪ್ ಶೆಟ್ಟಿ,ಬೀಸಿನಪಾರೆ ಶಾಲಾ ಮುಖ್ಯೋಪಾಧ್ಯಾಯ ರಾಜೀವ ಶೆಟ್ಟಿ ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯ ರವಿಶಂಕರ್ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಹ ಶಿಕ್ಷಕ ಗಣೇಶ ಕಾಸಾಡಿ ವಂದಿಸಿದರು,ಸಹ ಶಿಕ್ಷಕರಾದ ರತ್ನಾಕರ ದೇವಾಡಿಗ ಮತ್ತು ಪ್ರಕಾಶ ಚಂದ್ರ ಶೆಟ್ಟಿ ವಿವಿಧ ಚಟುವಟಿಕೆ ನಿರ್ವಹಿಸಿದರು. ವೇಣುಗೋಪಾಲ್ ಶೆಟ್ಟಿ ಮತ್ತು ಕೀರ್ತನಾ ಉಮೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.