ಕುಂದಾಪುರ

ಬಡಾಕೆರೆ ಶಾಲೆ ದತ್ತು ಸ್ವೀಕಾರ,ಪೂರ್ವಭಾವಿ ಸಭೆ

Share

ಕುಂದಾಪುರ:ಅವನತಿಯಲ್ಲಿರುವ ಸರಕಾರಿ ಶಾಲೆಗಳನ್ನು ಉದ್ಯಮಿಗಳು,ದಾನಿಗಳು,ಸಂಘ ಸಂಸ್ಥೆಗಳು ದತ್ತು ಸ್ವೀಕಾರ ಮಾಡುವುದರ ಮುಖೇನ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆಯಲ್ಲಿ ಬುಧವಾರ ನಡೆದ ಶಾಲೆ ದತ್ತು ಸ್ವೀಕಾರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳನ್ನು ಉಳಿಸಬೇಕು ಎನ್ನುವ ನೆಲೆಯಲ್ಲಿ 300 ಟ್ರಿಸ್ ಎನ್ನುವ ವಿನೂತನ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಇವೊಂದು ಪುಣ್ಯದ ಕೆಲಸದಲ್ಲಿ ಭಾಗಿದಾರರಾಗುವ ಮುಖೇನ ಮುಖೇನ ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಕೈ ಜೋಡಿಸಬೇಕು ಎಂದು ವಿನಂತಿಸಿಕೊಂಡರು.

ಪ್ರಾಂತೀಯ ಧರ್ಮಾದಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇ.ಮೂ ಲೋಕೇಶ್ ಅಡಿಗ ನಾಗ ಪಾತ್ರಿಗಳು ನಾವುಂದ ಬಡಾಕೆರೆ ಅವರು ಬಡಾಕೆರೆ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಮಾತನಾಡಿ,ಆಧುನಿಕ ಕಾಲ ಘಟ್ಟದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ವೈಭವೀಕರಣವನ್ನು ನೋಡಿದರೆ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಎನ್ನುವುದು ಮರಿಚಿಕೆ ಆಗಿದೆ ಎನ್ನುವ ಭಾವ ಮೂಡುತ್ತಿದೆ.ಪ್ರತಿಯೊಂದು ಮಗುವಿಗೂ ವಿದ್ಯೆ ಎನ್ನುವುದು ಬಹು ಮುಖ್ಯವಾದ ಅಂಶವಾಗಿದ್ದು ಇವೊಂದು ನೆಲೆಯಲ್ಲಿ ನಮ್ಮೂರಿನ ಮಕ್ಕಳಿಗೆ ಒಳ್ಳೆ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಶಾಲೆಯನ್ನು ದತ್ತು ಸ್ವೀಕಾರ ಮಾಡಲು ನಿರ್ಧರಿಸಲಾಗಿದೆ.ಶಾಲೆಯ ಸರ್ವತೊಮುಖ ಅಭಿವೃದ್ಧಿಗೆ ಊರಿನವರು ಸಹಕರಿಸಬೇಕೆಂದು ವಿನಂತಿಸಿಕೊಂಡರು.
ಊರಿನ ಜನರಲ್ಲಿ ಬಂಧುತ್ವ ಬೆಳೆದಾಗ ಮಾತ್ರ ಬಾಂಧವ್ಯ ಮೂಡಲು ಸಾಧ್ಯ ಪ್ರೀತಿಯಿಂದ ದಾನ ಮಾಡಿದರೆ ಗುರುತ್ವ ಗೌರವ ಸಿಗುತ್ತದೆ ಎಂದು ನುಡಿದರು.
ನಾಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆ ವಹಿಸಿದ್ದರು,ಹಿರಿಯರಾದ ಮಾದವ ಅಡಿಗ,ವಾಸು ಪೂಜಾರಿ,ನಾಡ ಪಂಚಾಯಿತಿ ಮಾಜಿ ಅಧ್ಯಕ್ಷ ದಿನೇಶ ಶೆಟ್ಟಿ,ಅಶೋಕ ಶೆಟ್ಟಿ ಸಂಸಾಡಿ,ಪ್ರವೀಣ್ ಶೆಟ್ಟಿ ಕಡಿಕೆ ಮತ್ತು ಗ್ರಾಮಸ್ಥರು,ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.ಪಂಚಾಯಿತಿ ಸದಸ್ಯ ಶ್ರೀಧರ ದೇವಾಡಿಗ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾ ಮುಖ್ಯೋಪಾಧ್ಯಾಯಿನಿ ರೋಹಿಣಿ ವಂದಿಸಿದರು.

ವರದಿ-ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago