ಕುಂದಾಪುರ:ಉತ್ತಮವಾದ ಶಿಕ್ಷಕರ ಪಡೆಯನ್ನು ಹೊಂದಿದ್ದರು ಆಧುನಿಕತೆಯ ಬದಲಾವಣೆಯಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ಕಷ್ಟಕರವಾದ ಪರಿಸ್ಥಿತಿ ಎನ್ನುವಂತೆ ಭಾಸವಾಗುತ್ತಿದೆ.ಮಕ್ಕಳಿಗೆ ಒಳ್ಳೆ ರೀತಿಯ ಶಿಕ್ಷಣವನ್ನು ನೀಡುವಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಎಲ್ಲಾ ಸರಕಾರಗಳು ಉತ್ತಮವಾದ ಹೆಜ್ಜೆಯನ್ನು ಇಟ್ಟಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಡಿಕೆ-ನಾಡ ಶಾಲೆ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಮತ್ತು ಚಿಣ್ಣರ ಕಲರವ-2024 ಕಾರ್ಯಕ್ರಮದಲ್ಲಿ ಧ್ವಜರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.
3 ರಿಂದ 11 ವರ್ಷದ ಒಳಗಿನ ಮಕ್ಕಳಿಗೆ ಯಾವ ರೀತಿ ಶಿಕ್ಷಣ ನೀಡಬಹುದು ಎನ್ನುವುದರ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿದೆ.ಕಡಿಕೆ ಶಾಲೆಯಲ್ಲಿನ ಮೂಲ ಸೌಕರ್ಯದ ವ್ಯವಸ್ಥೆಯನ್ನು ಗಮನಿಸಿದಾಗ ಬೈಂದೂರು ಕ್ಷೇತ್ರದಲ್ಲಿ ಇದೊಂದು ಮಾದರಿ ಶಾಲೆ ಆಗಿ ಗುರುತಿಸಿಕೊಂಡಿದೆ ಎಂದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ನಾಗೇಶ ಭಟ್ ಅಧ್ಯಕ್ಷತೆ ವಹಿಸಿದ್ದರು.ಶ್ರೀರಾಮ ಫಾರ್ಮ್ ಕೋಣ್ಕಿ ಕಾಡ್ರಿಹಾಡಿ ಸುಧಾಕರ ಶೆಟ್ಟಿ ಧ್ವಜಕಟ್ಟೆ ಉದ್ಘಾಟಿಸಿದರು.ನಾಡ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮೊಗವೀರ ದೀಪ ಬೆಳಗಿಸಿದರು.ಕಡಿಕೆ ಪ್ರವೀಣ್ ಕುಮಾರ್ ಶೆಟ್ಟಿ,ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಗಿರಿಜ,ಪಂಚಾಯತ್ ಸದಸ್ಯೆ ಪದ್ದು ಪೂಜಾರಿ,ಹಾಲು ಉತ್ಪಾದಕರ ಸಹಕಾರಿ ಸಂಘ ಕೋಣ್ಕಿ ಅಧ್ಯಕ್ಷ ರಾಜೀವ ಶೆಟ್ಟಿ,ಚಂದ್ರಶೇಖರ ಶೆಟ್ಟಿ ಕಡಿಕೆ,ಮಾಜಿ ತಾ.ಪಂ ಅಧ್ಯಕ್ಷರಾದ ಮಹೇಂದ್ರ ಪೂಜಾರಿ ಮತ್ತು ಶಂಕರ ಶೆಟ್ಟಿ,ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ,ಉದ್ಯಮಿ ಗೋಪಾಲ ಶೆಟ್ಟಿ ಜಡ್ಡಾಡಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ.ಜಿ ಮೊಗವೀರ,ಯೋಗಿರಾಜ್ ನಾರಾಯಣ ವಿಠ್ಠಲ,ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸಂತೋಷ ಹೆಬ್ಬಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಶ್ರೀಮತಿ ಮತ್ತು ಪ್ರಸಾದ ಶೆಟ್ಟಿ ಮತ್ತು ಮಕ್ಕಳು ಆಮನೆ ಕಡಿಕೆ ಶಾಲೆಗೆ ನೂತನ ಧ್ವಜಕಟ್ಟೆಯನ್ನು ಕೊಡುಗೆ ಆಗಿ ನೀಡಿದ್ದರು.
ಬೆಳಕು ಚಾರಿಟೇಬಲ್ ಟ್ರಸ್ಟ್ ರಾಘವೇಂದ್ರ ಶೆಟ್ಟಿ ಶಾಲೆಗೆ ಎರಡು ಕಂಪ್ಯೂಟರ್ ಅನ್ನು ಕೊಡುಗೆ ಆಗಿ ನೀಡಿದರು.
ಶಿಕ್ಷಕಿ ಪೂಜಾ ಸ್ವಾಗತಿಸಿದರು.ಶಿಕ್ಷಕ ಸಂದೀಪ ದೇವಾಡಿಗ ನಿರೂಪಿಸಿದರು.ಶಿಕ್ಷಕಿಯರಾದ ಶಿಲ್ಪಾ ಶ್ರೀ ಅಡಿಗ ಬಹುಮಾನ ಪಟ್ಟಿ ವಾಚಿಸಿದರು.ಸುಪ್ರಿತಾ ಶೆಟ್ಟಿ ವಂದಿಸಿದರು.ನಾನಾ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…