ಮುಂಬೈ (ಫೆ.2):ಹಾಟ್ ನಟಿ ಎಂದೇ ಹೆಸರುವಾಸಿಯಾಗಿರುವ ಪೂನಂ ಪಾಂಡೆ ಅವರು ಕ್ಯಾನ್ಸರ್‌ನಿಂದ ತಮ್ಮ 32ನೇ ವಯಸ್ಸಿನಲ್ಲೇ ಸಾವನನ್ನಪ್ಪಿದ್ದಾರೆ.ಅವರ ಮ್ಯಾನೇಜರ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಪೂನಮ್ ಪಾಂಡೆ ಅವರ ಮ್ಯಾನೇಜರ್ ಹಾಗೂ ಅವರ ಟೀಮ್ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದಾರೆ.ಅಧಿಕೃತ ಇನ್ಸ್‌ಟಾಗ್ರಾಮ್ ಪೇಜ್‌ನಲ್ಲಿ ಬರೆದುಕೊಂಡಿರುವ ಟೀಮ್, ‘ಇಂದಿನ ಬೆಳಗ್ಗೆ ನಮಗೆಲ್ಲರಿಗೂ ಕಠಿಣ ದಿನವಾಗಿತ್ತು. ಗರ್ಭಕಂಠದ ಕ್ಯಾನ್ಸರ್‌ನ ಕಾರಣದಿಂದಾಗಿ ಇಂದು ನಾವು ಪೂನಮ್ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ದುಃಖವಾಗುತ್ತಿದೆ. ಆಕೆಯೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಗಳಿಗೂ ಶುದ್ಧ ಪ್ರತಿ ಹಾಗೂ ದಯೆಯಿಂದ ಭೇಟಿಯಾಗುತ್ತಿದ್ದರು.ಈ ದುಃಖದ ಸಮಯದಲ್ಲಿ ನಾವು ನಮ್ಮ ಖಾಸಗಿತನಕ್ಕಾಗಿ ವಿನಂತಿ ಮಾಡುತ್ತಿದ್ದೇವೆ.ಆಕೆಯೊಂದಿಗೆ ಹಂಚಿಕೊಂಡ ಎಲ್ಲಾ ಕ್ಷಣಗಳನ್ನು ನಾವು ನೆನಪಿಸಿಕೊಳ್ಳುತ್ತಿದ್ದೇವೆ’ ಎಂದು ಬರೆದುಕೊಂಡಿದೆ. ಫೆಬ್ರವರಿ 1 ರಂದು ಅವರ ನಿಧನವಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.
ಕಾನ್ಪುರದಲ್ಲಿ ನಿಧನ: ಪೂನಮ್ ಪಾಂಡೆ ಅವರು ತಮ್ಮ ತವರು ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು ಇನ್ನಷ್ಟೇ ಬರಬೇಕಿದೆ. ತಮ್ಮ ವಿವಾದಿತ ಮಾತುಗಳಿಂದಲೇ ಪ್ರಖ್ಯಾತಿ ಪಡೆದಿದ್ದ ಪೂನಮ್ ಪಾಂಡೆ, ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಫಾಲೋವರ್‌ಗಳನ್ನು ಹೊಂದಿದ್ದರು.
2013ರಲ್ಲಿ ನಶಾ ಚಿತ್ರದ ಮೂಲಕ ಬಾಲಿವುಡ್‌ಗೆ ಲಗ್ಗೆ ಇಟ್ಟಿದ್ದ ಪೂನಮ್ ಪಾಂಡೆ ಅವರ ನಿಧನ ಅಭಿಮಾನಿಗಳಲ್ಲಿ ಆಘಾತಕ್ಕೆ ಕಾರಣವಾಗಿದೆ.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…