ದೇಶ-ವಿದೇಶ

ಹಾಟ್ ನಟಿ ಪೂನಂ ಪಾಂಡೆ ಕ್ಯಾನ್ಸರ್ ನಿಂದ ನಿಧನ

Share

ಮುಂಬೈ (ಫೆ.2):ಹಾಟ್‌ ನಟಿ ಎಂದೇ ಹೆಸರುವಾಸಿಯಾಗಿರುವ ಪೂನಂ ಪಾಂಡೆ ಅವರು ಕ್ಯಾನ್ಸರ್‌ನಿಂದ ತಮ್ಮ 32ನೇ ವಯಸ್ಸಿನಲ್ಲೇ ಸಾವನನ್ನಪ್ಪಿದ್ದಾರೆ.ಅವರ ಮ್ಯಾನೇಜರ್‌ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ‌ ಎಂದು ಬಲ್ಲ ಮೂಲಗಳು ತಿಳಿಸಿವೆ.
ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌ ಮಾಡಿದ್ದಾರೆ.ಅಧಿಕೃತ ಇನ್ಸ್‌ಟಾಗ್ರಾಮ್‌ ಪೇಜ್‌ನಲ್ಲಿ ಬರೆದುಕೊಂಡಿರುವ ಟೀಮ್‌, ‘ಇಂದಿನ ಬೆಳಗ್ಗೆ ನಮಗೆಲ್ಲರಿಗೂ ಕಠಿಣ ದಿನವಾಗಿತ್ತು. ಗರ್ಭಕಂಠದ ಕ್ಯಾನ್ಸರ್‌ನ ಕಾರಣದಿಂದಾಗಿ ಇಂದು ನಾವು ಪೂನಮ್‌ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ದುಃಖವಾಗುತ್ತಿದೆ. ಆಕೆಯೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಗಳಿಗೂ ಶುದ್ಧ ಪ್ರತಿ ಹಾಗೂ ದಯೆಯಿಂದ ಭೇಟಿಯಾಗುತ್ತಿದ್ದರು.ಈ ದುಃಖದ ಸಮಯದಲ್ಲಿ ನಾವು ನಮ್ಮ ಖಾಸಗಿತನಕ್ಕಾಗಿ ವಿನಂತಿ ಮಾಡುತ್ತಿದ್ದೇವೆ.ಆಕೆಯೊಂದಿಗೆ ಹಂಚಿಕೊಂಡ ಎಲ್ಲಾ ಕ್ಷಣಗಳನ್ನು ನಾವು ನೆನಪಿಸಿಕೊಳ್ಳುತ್ತಿದ್ದೇವೆ’ ಎಂದು ಬರೆದುಕೊಂಡಿದೆ. ಫೆಬ್ರವರಿ 1 ರಂದು ಅವರ ನಿಧನವಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ಕಾನ್ಪುರದಲ್ಲಿ ನಿಧನ: ಪೂನಮ್‌ ಪಾಂಡೆ ಅವರು ತಮ್ಮ ತವರು ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು ಇನ್ನಷ್ಟೇ ಬರಬೇಕಿದೆ. ತಮ್ಮ ವಿವಾದಿತ ಮಾತುಗಳಿಂದಲೇ ಪ್ರಖ್ಯಾತಿ ಪಡೆದಿದ್ದ ಪೂನಮ್‌ ಪಾಂಡೆ, ಸೋಶಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದ ಫಾಲೋವರ್‌ಗಳನ್ನು ಹೊಂದಿದ್ದರು.
2013ರಲ್ಲಿ ನಶಾ ಚಿತ್ರದ ಮೂಲಕ ಬಾಲಿವುಡ್‌ಗೆ ಲಗ್ಗೆ ಇಟ್ಟಿದ್ದ ಪೂನಮ್‌ ಪಾಂಡೆ ಅವರ ನಿಧನ ಅಭಿಮಾನಿಗಳಲ್ಲಿ ಆಘಾತಕ್ಕೆ ಕಾರಣವಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago