ಆರಾಧ್ಯ ಖಾರ್ವಿಗೆ ದ್ವಿತೀಯ ಸ್ಥಾನ

ಕುಂದಾಪುರ:ಜ.28 ರಂದು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ಅರಾಧ್ಯ ಖಾರ್ವಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ನಾಲ್ಕನೇ ತರಗತಿ ವಿದ್ಯಾರ್ಥಿ. ನಾಗರಾಜ್ ಖಾರ್ವಿ ಮತ್ತು ದೀಪಾ ಖಾರ್ವಿ ದಂಪತಿಗಳ ಪುತ್ರಿ .ಸಂಸ್ಥೆಯ ಶಿಕ್ಷಕರಾದ ಪ್ರಸನ್ನ ಕೆ. ಬಿ ಮತ್ತು ಸುನಿತಾ ಇವರು ತರಬೇತಿಯನ್ನು ನೀಡಿರುತ್ತಾರೆ.