ಕುಂದಾಪುರ:ಶ್ರೀ ಬಗಳಾಂಬ ತಾಯಿ ದೇವಸ್ಥಾನ ಚಿಕ್ಕನ್‍ಸಾಲ್ ರಸ್ತೆ ಕುಂದಾಪುರ ಇದರ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ಫೆ. 20 ರಿಂದ ಆರಂಭಗೊಂಡು ಫೆ.23 ರ ತನಕ ನಡೆಯಲಿದೆ.
ಶ್ರೀ ಬಗಳಾಂಬ ತಾಯಿ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಫೆಬ್ರವರಿ 20 ರಂದು ಗುರುಸನ್ನಿಧಿಯಲ್ಲಿ ಕಲಾಭಿವೃದ್ಧಿ ಹೋಮ,ಕಲಶಾಭಿಷೇಕ ಸಂಜೆ 5.ಕ್ಕೆ ಶ್ರೀ ಬಗಳಾಂಬ ತಾಯಿಯ ಕಲಾಸಂಕೋಚ ನಡೆಯಲಿದೆ.
ಫೆಬ್ರವರಿ 21 ರಂದು ಶ್ರೀ ಕಾಲಭೈರೇಶ್ವರ,ಶ್ರೀ ಅಂಜನೇಯ ಶ್ರೀ ನಾಗದೇವರಿಗೆ ಕಲಶಾಭಿಷೇಕ,ಸತ್ಯನಾರಾಯಣ ಪೂಜೆ.
ಫೆಬ್ರವರಿ 22 ರಂದು ಬೆಳಿಗ್ಗೆ 5.20 ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ರತ್ನನ್ಯಾಸಪೂರ್ವಕ ಶ್ರೀ ಬಗಳಾಂಬ ತಾಯಿಯ ಪುನರ್ ಪ್ರತಿಷ್ಠೆ ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ ಜರುಗಲಿದೆ.
ಫೆಬ್ರವರಿ 23 ರಂದು ಬೆಳಿಗ್ಗೆ 7.ಕ್ಕೆ ಚಂಡಿಕಾಯಾಗ,ಬ್ರಹ್ಮಕಲಶಾಭಿಷೇಕ,ಮಧ್ಯಾಹ್ನ 12.30 ಕ್ಕೆ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ತಿಳಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ನೋಟ
ಫೆ.21 ಬುಧವಾರ ರಾತ್ರಿ 8.ಕ್ಕೆ ಭಕ್ತಿ-ಭಾವ-ನಾಟ್ಯ
ಫೆ.22 ಗುರುವಾರ ರಾತ್ರಿ 8.ಕ್ಕೆ ಯಕ್ಷಗಾನ ಪ್ರದರ್ಶನ-ಚಕ್ರ ಚಂಡಿಕೆ
ಫೆ.23 ಶುಕ್ರವಾರ ರಾತ್ರಿ 8.ಕ್ಕೆ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ಜರುಗಲಿದೆ.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…