ಮಂಗಳೂರು:ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿ ನಿಲಯ” ನೂತನ ಮನೆಯ ಕೀಲಿಕೈಯನ್ನು ಹನುಮ ಗಿರಿಮೇಳದ ಕಲಾವಿದ ಶ್ರೀ ರೂಪೇಶ್ ಆಚಾರ್ಯ ಅವರಿಗೆ ಭಾನುವಾರ ಹಸ್ತಾಂತರ ಮಾಡಲಾಯಿತು.ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿಗಳಾದ ಅಶೋಕ್ ಶೆಟ್ಟಿ ಬೆಳ್ಳಾಡಿ ಅವರು ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಿ ಶುಭಹಾರೈಸಿದರು.ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಅಳಿಕೆ ಹಾಗೂ ಪದಾಧಿಕಾರಿಗಳಾದ ಅರವಿಂದ ರೈ ಮೂರ್ಜೆಬೆಟ್ಟು ಹಾಗೂ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಉಪಸ್ಥಿತರಿದ್ದರು.
ಬಡವರ ಕಣ್ಣೀರೊರಸಲು ಹೃದಯಪೂರ್ವಕವಾಗಿ ಸಹಕರಿಸಿದ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ದಾನಿಗಳಾದ ಶ್ರೀ ಅಶೋಕ್ ಶೆಟ್ಟಿ ಬೆಳ್ಳಾಡಿ ಹಾಗೂ ಶ್ಯಾಮಲಾ ಅಶೋಕ್ ಶೆಟ್ಟಿ ಅವರನ್ನು ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ವತಿಯಿಂದ ರೂಪೇಶ್ ಆಚಾರ್ಯ ಅವರು ಮತ್ತು ಮನೆಯವರನ್ನು ಗೌರವಿಸಲಾಯಿತು.ಈ ಸಂದರ್ಭ ವಿಟ್ಲ ಘಟಕದ ಪದಾಧಿಕಾರಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…