ಪ್ರಮುಖ

ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ :ಸಿಎಂ ಆದೇಶ

Share

ಉಡುಪಿ:ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ.ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ ಹೆಬ್ಬಾಳ್ಕರ್ ಅವರು,ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು.ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ,ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿತ್ತು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago