ಮಂಗಳೂರು:ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ ಸುಖ್ಯಾಂತಗೊಳ್ಳುವತ್ತ ಸಾಗಿದೆ. ರಾಜ್ಯ ಹೈಕಮಾಂಡ್ ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ನಿರ್ಧರಿಸಿದೆ ಹಾಗೂ ಈ ಕುರಿತ ಮಾಹಿತಿಯನ್ನು ಅರುಣ್ ಪುತ್ತಿಲರವರಿಗೆ ರವಾನಿಸಿದೆ ಎಂದು ತಿಳಿದು ಬಂದಿದೆ.ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಪುತ್ತೂರು ನಲ್ಲಿ ಮತ್ತೆ ಬಿಜೆಪಿ ಪಕ್ಷ ಸೆಟೆದು ನಿಲ್ಲದೆ.ರಾಜ್ಯ ಬಿಜೆಪಿ ವರಿಷ್ಠರಾದ ಬಿ.ಎಸ್ ಯಡಿಯೂರಪ್ಪ,ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ,ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಈ ಕುರಿತು ಅರುಣ್ ಪುತ್ತಿಲರಿಗೆ ಸಂದೇಶ ರವಾನಿಸಿ ಪಕ್ಷದಲ್ಲಿ ಗೌರವಯುತ ಸ್ಥಾನ ನೀಡುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ.ಪಕ್ಷದ ಹಿರಿಯರ ಮಾತಿಗೆ ಅರುಣ್ ಪುತ್ತಿಲ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.ಪುತ್ತೂರು ಕ್ಷೇತ್ರದ ಎಂಎಲ್ಎ ಟಿಕೆಟ್ ಪುತ್ತಿಲ ಅವರಿಗೆ ನಿರಾಕರಿಸಿದ್ದರಿಂದ ಬಿಜೆಪಿ ಪಕ್ಷದಿಂದ ಹೊರ ನಡೆದಿದ್ದ ಅವರು ಪುತ್ತಿಲ ಪರಿವಾರ ಎಂಬ ಅಭಿಮಾನ ಬಳಗವನ್ನು ಕಟ್ಟಿ ತನ್ನ ಕಾರ್ಯಕರ್ತರ ಬೆಂಬಲದಿಂದ ಸ್ವತಂತ್ರವಾಗಿ ಸ್ಪರ್ಧಿಸಿ ಅಶೋಕ್ ರೈ ವಿರುದ್ಧ ಕೆಲವೇ ಕೆಲವು ಮತಗಳ ಅಂತರದಿಂದ ಸೋತಿದ್ದರು.ವಿಧಾನ ಸಭೆ ಚುನಾವಣೆ ಬಳಿಕ ಪುತ್ತೂರು ನಲ್ಲಿ ನಡೆದ ಪುರಸಭೆ ಮತ್ತು ಲೋಕಲ್ ಎಲೆಕ್ಷನ್ ನಲ್ಲಿ ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.ದ.ಕ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಪುತ್ತಿಲ ಮೊದಲಿಗರಾಗಿದ್ದಾರೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…