ಕುಂದಾಪುರ:ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಬೈಂದೂರು ತಾಲೂಕಿನ ಪ್ರಸಿದ್ಧ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀಮನಹ್ಮಾ ಬ್ರಹ್ಮರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.ಹಬ್ಬದ ಪ್ರಯುಕ್ತ ವಿಶೇಷ ಕಟ್ಟೆ ಪೂಜೆ ಹಾಗೂ ಪ್ರತಿ ಮನೆಯಲ್ಲಿ ದೀಪಾಲಂಕಾರ ರಂಗೋಲಿ ಹಾಕಿ ದೇವರನ್ನು ಬರಮಾಡಿಕೊಳ್ಳುತ್ತಾರೆ.ಕಟ್ಟಿ ಪೂಜೆ ಇಲ್ಲಿನ ವಿಶೇಷ ಆಕರ್ಷಣೆ ಬಿಂದುವಾಗಿದೆ.
ಶ್ರೀ ಲಕ್ಷ್ಮೀ ಜನಾರ್ದನ ದೇವರ ರಥೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇವರಿಗೆ ಅಲಂಕಾರ ಪೂಜೆ,ಹಣ್ಣುಕಾಯಿ,ವಿಶೇಷ ಪೂಜೆ ಸಮರ್ಪಣೆ,ಮಂಗಳಾರತಿ ಸೇವೆ,ತುಲಭಾ,ಪಂಚಕಜ್ಜಾಯ ನೈವೇದ್ಯ,ಚೂರ್ಣೋತ್ಸವ, ಮತ್ತು ಅನ್ನ ಸಂತರ್ಪಣೆ ಸೇವೆ ನಡೆಯಿತು.ರಾಜಾರಾಮ ಸೋಮಾಯಾಜೀ ಮತ್ತು ಊರಿನ ಪುರೋಹಿತರು ಜೊತೆಗೂಡಿ ಧಾರ್ಮಿಕ ಕ್ರಾಯಕ್ರಮಗಳನ್ನು ನಡೆಸಿಕೊಟ್ಟರು.ಹರಕೆ ರೂಪದಲ್ಲಿ ಕರ್ಪೂರವನ್ನು ದೇವರಿಗೆ ಸಲ್ಲಿಸುವುದು ಇಲ್ಲಿನ ವಿಶೇಷತೆ ಆಗಿದೆ.
ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕರ್ಪೂರ ಸೇವೆ ನಡೆಯುವ ದೇವಸ್ಥಾನವಾಗಿದೆ.ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿ,ಸರ್ವ ಸದಸ್ಯರು,ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…