ಮಂಗಳೂರು

ಧಾರಾವಾಹಿಯಲ್ಲಿ ದೈವದ ವೇಷ ಬಳಕೆ,ದೈವಾರಾಧಕ ರಿಂದ ದೂರು ದಾಖಲು

Share

ಪಂಜರ ಮೀನು ಕೃಷಿ ಮಾಡುವುದು ಹೇಗೆ,ರಮೇಶ್ ಖಾರ್ವಿ ಅವರಿಂದ ಕೇಳಿ ತಿಳಿಯೋಣ.

ಮಂಗಳೂರು:ಖಾಸಗಿ ಟಿವಿ ವಾಹಿನಿಯೊಂದು ತನ್ನ ಧಾರವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆ ಬಗ್ಗೆ ದೃಶ್ಯಾವಳಿಯನ್ನು ಬಳಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದ್ದು,ಕರಾವಳಿ ಭಾಗದ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ಮಾತ್ರವಲ್ಲ ತುಳುನಾಡ ಮಂದಿ ಕೂಡ ಈ ಬಗ್ಗೆ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ವಾಹಿನಿ ಬಗ್ಗೆ ಹಾಗೂ ಧಾರಾವಾಹಿ ತಂಡ ಮತ್ತು ಡೈರೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರ್ ಪ್ರೀತಮ್ ಶೆಟ್ಟಿ ಈ ಧಾರಾವಾಹಿ ಯನ್ನು ನಿರ್ದೇಶನ ಮಾಡುತ್ತಿದ್ದಾರೆ.ದೈವಾರಾಧನೆ ಪ್ರದರ್ಶನ ಧಾರಾವಾಹಿಗೂ ವ್ಯಾಪಿಸಿರುವುದು ದೈವಾರಾಧಕರ ಕೆಂಗಣ್ಣಿಗೆ ಗುರಿಯಾಗಿದೆ. ಧಾರಾವಾಹಿಯಲ್ಲಿ ದೈವಕೋಲ ಮಾಡಿರುವುದಕ್ಕೆ ತುಳುನಾಡ ದೈವಾರಾಧಕರು ಗರಂ ಆಗಿದ್ದಾರೆ.ಭೂತಾರಾಧನೆ ಪ್ರದರ್ಶನ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಖಾಸಗಿ ವಾಹಿನಿಯ ಧಾರಾವಾಹಿಯ ಪ್ರೋಮೋ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಲಾಗಿದೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನಿಗೆ ಸಾಮಾಜಿಕ ಜಾಲತಾಣದಲ್ಲೂ ಕ್ಲಾಸ್ ತೆಗೆದುಕೊಳ್ಳಲಾಗಿದೆ.ವಿಡಿಯೋ ವೈರಲ್ ಬೆನ್ನಲ್ಲೇ ಯಾವುದೇ ಕಾರಣಕ್ಕೂ ಧಾರವಾಹಿ ತೆರೆ ಮೇಲೆ ಬರಬಾರದೆಂದು ಪಟ್ಟು ಹಿಡಿದಿರುವ ತುಳುನಾಡ ದೈವಾರಾಧೆ ಸಂರಕ್ಷಣಾ ಯುವ ವೇದಿಕೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago