ಕುಂದಾಪುರ

ಅರಾಟೆಯಲ್ಲಿ ಭೀಕರ ಅಪಘಾತ ಬ್ಯಾಂಕ್ ಮ್ಯಾನೇಜರ್ ಸಾವು

Share

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಾಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೆನರಾ ಬ್ಯಾಂಕ್ ಮರವಂತೆ ಶಾಖೆ ಮ್ಯಾನೇಜರ್ ಮುಂಬಯಿ ಮೂಲದ ನಿವಾಸಿ ರಾಹುಲ್ ಬಾಲಕೃಷ್ಣ ರಂಖಬ್ಮೆ ಎನ್ನುವ ವ್ಯಕ್ತಿ ಶನಿವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಬೈಂದೂರು ಕಡೆಯಿಂದ ಕುಂದಾಪುರ ಕಡೆಯಿಂದ ಸಾಗುತ್ತಿದ್ದ ಕೇರಳ ನೋಂದಣಿ ಹೊಂದಿರುವ ಲಾರಿ ಅರಾಟೆ ಬಳಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್ ಸವಾರ ಬ್ಯಾಂಕ್ ಉದ್ಯೋಗಿ ರಾಹುಲ್ ಬಾಲಕೃಷ್ಣ ರಂಖಬ್ಮೆ ಅವರು ಸಾವನ್ನಪ್ಪಿದ್ದಾರೆ.ಅತ್ಯಂತ ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ಉತ್ತಮ ಸೇವೆ ನೀಡುವುದರ ಮೂಲಕ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು.

ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ.ಗಾಡಿಯನ್ನು ಅಡ್ಡಗಟ್ಟಲು ಸ್ಥಳೀಯರು ಬೈನ್ನಟ್ಟಿ ಹೋದ ಸಮಯದಲ್ಲಿ ಲಾರಿ ಚಾಲಕ ತನ್ನ ಲಾರಿಯನ್ನು ಹೆಮ್ಮಾಡಿ ಪೇಟೆಯೊಳಗೆ ನುಗ್ಗಿಸಿ ಪುನಃ ಬೈಂದೂರು ಕಡೆಗೆ ಸಾಗುವ ರಸ್ತೆಯಲ್ಲಿ ಸಾಗಿ ಬಂದು ಮುಳ್ಳಿಕಟ್ಟೆ ಡಿವೈಡರ್ ಒಳಗೆ ರಾಂಗ್ ಸೈಡ್‍ನಲ್ಲಿ ತನ್ನ ಗಾಡಿಯನ್ನು ನುಗ್ಗಿಸಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಾಷ್ಟ್ರೀಯ ಹೆದ್ದಾರಿ ಚರಂಡಿ ಯೊಳಗೆ ಸಿಲುಕೊಂಡಿದೆ.ಪರಿಣಾಮ ಲಾರಿ ಮುಂದೆ ಚಲಿಸದೆ ಸಿಕ್ಕಿ ಹಾಕಿ ಕೊಂಡಿತ್ತು.ಕ್ರೈನ್ ಮೂಲಕ ಲಾರಿಯನ್ನು ಮೇಲಕ್ಕೆ ಎತ್ತಲಾಯಿತು.ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಇಬ್ರಾಹಿಂ ಗಂಗೊಳ್ಳಿ ಅವರು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆ ಸಾಗಿಸಲು ಸಹಕರಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago