ಕುಂದಾಪುರ:ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹಾಗೂ ಯುವಜನರು ಉದ್ಯೋಗಕ್ಕಾಗಿ ಬೆಂಗಳೂರು,ಮುಂಬಯಿ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಿಗೆ ದಿನಂಪ್ರತಿ ತೆರಳುತ್ತಿದ್ದಾರೆ.ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಮಾಡಲು ಕೂಡಲೆ ಕ್ರಮಗಳನ್ನು ಕೈಗೊಳ್ಳಬೇಕು ಇದು 24 ಗ್ರಾಮದ ಜನರ ಆಗ್ರಹವಾಗಿದೆ.ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಕ್ರಮ ಕೈಗೊಳ್ಳದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದ ಮೂಲಕ ಉಗ್ರ ಹೋರಾಟ ಮಾಡಲಾಗುವುದೆಂದು ಸೇನಾಪುರ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ಸಂಚಾಲಕ ರಾಜೀವ ಪಡುಕೋಣೆ ಹೇಳಿದರು.
ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಭಾನುವಾರ ಕುಂದಾಪುರ ತಾಲೂಕಿನ ಸೇನಾಪುರ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಎರಡನೇ ಹಂತದ ಸೇನಾಪುರ ಚಲೋ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆ ಆಗಬೇಕೆಂದು ಒತ್ತಾಯಿಸಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ರೈಲು ನಿಲ್ದಾಣದ ಎದುರು ಹಕ್ಕೋತ್ತಾಯ ಸಭೆಯನ್ನು ನಡೆಸಿ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಮೂಲಕ ಇಲಾಖೆ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗಿದೆ.ಹೋರಾಟ ಮಾಡಿ ಐದು ತಿಂಗಳುಗಳು ಕಳೆದರು ಇಲಾಖೆ ಜನರ ಬೇಡಿಕೆಗೆ ಸ್ಪಂದಿಸುವ ಗೋಜಿಗೆ ಹೋಗಿಲ್ಲ.ಜನರ ಭಾವನೆಗಳನ್ನು ಹತ್ತಿಕ್ಕುವಂತಹ ಕೆಲಸವನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಮಾಡುತ್ತಿದ್ದಾರೆ ಎಂದು ದೂರಿದರು.
ಹೋರಾಟ ಸಮಿತಿ ಸದಸ್ಯ ಕೆನಡಿ ಪಿರೇರಾ ಮಾತನಾಡಿ,ಕರಾವಳಿ ಭಾಗದ ಧಾರ್ಮಿಕ ಮತ್ತು ಪ್ರವಾಸೋದ್ಯಮ ಚಟುವಟಿಕೆಗೆ ಉತ್ತೇಜನ ನೀಡಬೇಕಾದರೆ ಸೇನಾಪುರದಲ್ಲಿ ಎಲ್ಲಾ ಮಾದರಿಯ ರೈಲುಗಳು ನಿಲುಗಡೆ ಆಗಬೇಕು ಎಂದು ಹೇಳಿದರು.
ಕಟ್ಟಡ ಕಾರ್ಮಿಕ ಸಂಘಟನೆ ಮುಖಂಡರಾದ ಸುರೇಶ ಕಲ್ಲೆಗಾರ ಅವರು ಮಾತನಾಡಿ,ಸೇನಾಪುರ ರೈಲು ನಿಲ್ದಾಣದಲ್ಲಿ ಎಲ್ಲಾ ಮಾದರಿಯ ಎಕ್ಸ್ ಪ್ರೆಸ್ ರೈಲು ನಿಲುಗಡೆ ಮಾಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದರು ಜನರ ಧ್ವನಿಗೆ ಜನ ಪ್ರತಿನಿಧಿಗಳು ಸರಕಾರಗಳು ಸ್ಪಂದನೆ ಮಾಡುತ್ತಿಲ್ಲ.ರೈಲು ಸೇವೆ 24 ಗ್ರಾಮದ ಜನರಿಗೆ ಸಿಗಬೇಕು ಎನ್ನುವ ಉದ್ದೇಶದಿಂದ ಹೋರಾಟವನ್ನು ಮಾಡುತ್ತಿದ್ದೇವೆ ಇದು ನಮ್ಮ ಹಕ್ಕೊತ್ತಾಯವಾಗಿದೆ.ಸೇನಾಪುರದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಕ್ರಮ ಕೈಗೊಳ್ಳದೆ ಇದ್ದಲ್ಲಿ.ಮೂರನೇ ಹಂತದ ಹೋರಾಟದ ಅಂಗವಾಗಿ ರೈಲು ತಡೆಹಿಡಿದು ಪಟ್ಟಿ ಮೇಲೆ ಮಲಗಿ ಹೋರಾಟ ಮಾಡಲಾಗುವುದು ಎಂದು ಹೇಳಿದರು.
ಸಿಐಟಿಯು ಜಿಲ್ಲಾ ಮುಖಂಡ ಬಾಲಕೃಷ್ಣ ಶೆಟ್ಟಿ ಮಾತನಾಡಿ,ಎಕ್ಸ್ ಪ್ರೆಸ್ ,ಗೂಡ್ಸ್ ರೈಲು ನಿಲುಗಡೆ ಮಾಡುವುದರಿಂದ ಗಂಗೊಳ್ಳಿ ಬಂದರಿನಿಂದ ನೆರವಾಗಿ ಸಾಗರ ಉತ್ಪನ್ನಗಳನ್ನು ರಪ್ತು ಮಾಡಬಹುದಾಗಿದೆ.ವಾಣಿಜ್ಯ ಉದೇಶದಿಂದ ರೈಲು ನಿಲುಗಡೆ ಮಾಡುವುದರಿಂದಲೂ ವ್ಯಾಪಾರ ವಹಿವಾಟು ವೃದ್ಧಿಯಾಗಲಿದೆ.ಆರ್ಥಿಕ ಉದ್ದೇಶವನ್ನು ಇಟ್ಟು ಕೊಂಡು ಸೇನಾಪುರದಲ್ಲಿ ರೈಲು ನಿಲುಗಡೆ ಮಾಡಲು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಹಂಚು ಕಾರ್ಮಿಕ ಸಂಘಟನೆ ಮುಖಂಡ ಎಚ್.ನರಸಿಂಹ ಮಾತನಾಡಿ,ಹಬ್ಬ ಹರಿದಿನದ ಸದರ್ಭದಲ್ಲಿ ಬಸ್ಸಿನ ಟಿಕೆಟ್ ದರವನ್ನು ದುಪ್ಪಟ್ಟು ಏರಿಕೆ ಮಾಡುವುದರ ಮೂಲಕ ಖಾಸಗಿ ಬಸುಗಳ ಮಾಲೀಕರು ಹಳ್ಳಿ ಜನರ ದುಡ್ಡನ್ನು ಲೂಟಿಮಾಡುತ್ತಿದ್ದಾರೆ.ಇದನ್ನು ತಪ್ಪಿಸಬೇಕಾದರೆ ಸೇನಾಪುರದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಯಿಂದ ಮಾತ್ರ ಸಾಧ್ಯವಿದೆ ಎಂದರು.
ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ,ಸುರೇಶ ಕಲ್ಲೆಗಾರ,ನಾವುಂದ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ,ಗುಜ್ಜಾಡಿ ಗ್ರಾ.ಪಂ ಅಧ್ಯಕ್ಷ ತಮ್ಮಯ್ಯ ದೇವಾಡಿಗ,ಜನಾವಾದಿ ಮಹಿಳಾ ಸಂಘಟನೆ ಮುಖಂಡರು,ಕಟ್ಟಡ ಕಾರ್ಮಿಕರು,24 ಗ್ರಾಮದ ಗ್ರಾಮಸ್ಥರು, ಉಪಸ್ಥಿತರಿದ್ದರು.ನಾಗರಾಜ ಕುರು ಸ್ವಾಗತಿಸಿದರು.ಶ್ರೀಧರ ನಾಡ ನಿರೂಪಿಸಿದರು,ರಾಜೀವ ಪಡುಕೋಣೆ ವಂದಿಸಿದರು.ರಿಜಿನಲ್ ರೈಲ್ವೆ ಇಲಾಖೆ ಅಧಿಕಾರಿ ವಿನಯ ಕುಮಾರ್ ಅವರಿಗೆ ಹೋರಾಟ ಸಮಿತಿ ಸದಸ್ಯರು ಮನವಿಯನ್ನು ಸಲ್ಲಿಸಿದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ನೇತೃತ್ವದಲ್ಲಿ ಪೆÇಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ವರದಿ:-ಜಗದೀಶ ದೇವಾಡಿಗ ಮುಳ್ಳಿಕಟ್ಟೆ
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…