ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಪೂರ್ವ ಮಾಹಿತಿ ಕಾರ್ಯಕ್ರಮ ‘ಪುಷ್ಟಿ’ 2024

ನಾವುಂದ:ಶುಭದಾ ಆಂಗ್ಲ ಮಾಧ್ಯಮ ಶಾಲೆ ನಾವುಂದದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮಾಹಿತಿ ‘ಪುಷ್ಟಿ’ 2024 ಕಾರ್ಯಕ್ರಮ ನಡೆಯಿತು.
ಸಮರ್ಪಣಾ ಎಜುಕೇಶನಲ್ ಟ್ರಸ್ಟ್ (ರಿ)ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲಿ ಹತ್ತನೇ ತರಗತಿ ಪ್ರಮುಖವಾದ ಕಾಲಘಟ್ಟವಾಗಿದ್ದು ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕಲಿಕೆ ಅತ್ಯುತ್ತಮವಾಗಬೇಕು ಓದುವ ಆಸಕ್ತಿ ದಿನದಿಂದ ದಿನಕ್ಕೆ ಹೆಚ್ಚಾಗಬೇಕು.ವಿದ್ಯಾರ್ಥಿಗಳೇ ಸಮಯ ವ್ಯರ್ಥ ಮಾಡದೇ ಓದಿ ಭವಿಷ್ಯ ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಶಿಕ್ಷಕರಾದ ಕರುಣಾಕರ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ,ಪರೀಕ್ಷಾ ಪೂರ್ವ ತಯಾರಿಯ ಕುರಿತು ಮಾಹಿತಿಯನ್ನು ನೀಡಿದರು. ಜನತಾ ಪ್ರೌಢಶಾಲೆ ಹೆಮ್ಮಾಡಿ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ,ಶುಭದಾ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕರಾದ ರವಿದಾಸ್ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು,ಜನತಾ ಕಾಲೇಜಿನ ಉಪನ್ಯಾಸಕರಾದ ಉಮೇಶ್ ನಾಯ್ಕ್ ಸ್ವಾಗತಿಸಿದರು,ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ,ವಂದಿಸಿದರು.



















































































































































































































































































































































































































































































































































































































































































































































































































































































































































































































































































































































































































































































































































































































































































