ಕುಂದಾಪುರ:ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಿಗೋಳಗಾದ ಮೀನುಗಾರರಿಗೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಮೂಲಕ ರಾಜ್ಯ ಸರಕಾರ 1.75.ಕೋಟಿ.ರೂ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿ ಮೀನುಗಾರರಿಗೆ 28.ಲಕ್ಷ.ರೂ ಪರಿಹಾರವನ್ನು ಮಂಜೂರು ಮಾಡಿದೆ.
ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಸಮಿತಿ ಸಭೆಯಲ್ಲಿ ಅಗ್ನಿ ದುರಂತದದಿಂದ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ.ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ,ಚೇತನ್ ಬೆಂಗ್ರೆ,ರಾಜು ತಾಂಡೇಲಾ,ಭಟ್ಕಳ ವೆಂಕಟರಮಣ ಭಟ್,ಸಮಿತಿ ಸದಸ್ಯರಾದ ಎಸ್.ಮದನ್ ಕುಮಾರ್ ಉಪ್ಪುಂದಮೀನುಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಗಂಗೊಳ್ಳಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೀನುಗಾರರಿಗೆ ಗರಿಷ್ಠ ಪರಿಹಾರ ನೀಡುವಂತೆ ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು.
ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಮೂಲಕ ರಾಜ್ಯ ಸರಕಾರ ಪರಿಹಾರವನ್ನು ಘೋಷಣೆ ಮಾಡಿರುವುದು ಸಂತಸ ತಂದಿದೆ.ಗಂಗೊಳ್ಳಿ ಅಗ್ನಿ ದುರಂತದಲ್ಲಿ ಮೀನುಗಾರರಿಗೆ 10.ಕೋಟಿಗೂ ಅಧಿಕ ನಷ್ಟ ವಾಗಿರುವುದರಿಂದ ಮುಖ್ಯ ಮಂತ್ರಿಗಳ ಪರಿಹಾರ ನಿಧಿಅಡಿಯಲ್ಲಿ ಇನ್ನೂ ಹೆಚ್ಚಿನ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…