ಕುಂದಾಪುರ

ಗಂಗೊಳ್ಳಿ ಅಗ್ನಿ ದುರಂತ,ಪರಿಹಾರ ಘೋಷಣೆ

Share

ಕುಂದಾಪುರ:ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಿಗೋಳಗಾದ ಮೀನುಗಾರರಿಗೆ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಮೂಲಕ ರಾಜ್ಯ ಸರಕಾರ 1.75.ಕೋಟಿ.ರೂ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿ ಮೀನುಗಾರರಿಗೆ 28.ಲಕ್ಷ.ರೂ ಪರಿಹಾರವನ್ನು ಮಂಜೂರು ಮಾಡಿದೆ.
ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಸಮಿತಿ ಸಭೆಯಲ್ಲಿ ಅಗ್ನಿ ದುರಂತದದಿಂದ ಸಂಕಷ್ಟಕ್ಕೆ ಸಿಲುಕಿದ ಮೀನುಗಾರರಿಗೆ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಗಿದೆ.ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ,ಚೇತನ್ ಬೆಂಗ್ರೆ,ರಾಜು ತಾಂಡೇಲಾ,ಭಟ್ಕಳ ವೆಂಕಟರಮಣ ಭಟ್,ಸಮಿತಿ ಸದಸ್ಯರಾದ ಎಸ್.ಮದನ್ ಕುಮಾರ್ ಉಪ್ಪುಂದಮೀನುಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಗಂಗೊಳ್ಳಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೀನುಗಾರರಿಗೆ ಗರಿಷ್ಠ ಪರಿಹಾರ ನೀಡುವಂತೆ ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು.
ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಮೂಲಕ ರಾಜ್ಯ ಸರಕಾರ ಪರಿಹಾರವನ್ನು ಘೋಷಣೆ ಮಾಡಿರುವುದು ಸಂತಸ ತಂದಿದೆ.ಗಂಗೊಳ್ಳಿ ಅಗ್ನಿ ದುರಂತದಲ್ಲಿ ಮೀನುಗಾರರಿಗೆ 10.ಕೋಟಿಗೂ ಅಧಿಕ ನಷ್ಟ ವಾಗಿರುವುದರಿಂದ ಮುಖ್ಯ ಮಂತ್ರಿಗಳ ಪರಿಹಾರ ನಿಧಿಅಡಿಯಲ್ಲಿ ಇನ್ನೂ ಹೆಚ್ಚಿನ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago