ಕುಂದಾಪುರ:ಬಹಳಷ್ಟು ನಿರೀಕ್ಷೆಯನ್ನು ಹುಟ್ಟು ಹಾಕಿರುವ ಮತ್ಸ್ಯಗಂಧ ಚಲನಚಿತ್ರ ಶುಕ್ರವಾರ ರಾಜ್ಯದಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.ಕರಾವಳಿ ಭಾಗದ ಜನರ ಜೀವನ ಪದ್ಧತಿ ಹಾಗೂ ಮೀನುಗಾರರ ಬದುಕಿನ ಬಗ್ಗೆ ಕಥಾ ಹಂದರವನ್ನು ಹೊಂದಿರುವ ಮತ್ಸ್ಯಗಂಧ ಚಲನಚಿತ್ರ ಜನರ ಮನಗೆದ್ದಿದ್ದು ಸಿನಿಮಾ ಥಿಯೇಟರ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ.
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟನೆ ಮಾಡುವ ಮೂಲಕ ಈಗಾಗಲೇ ಕನ್ನಡಿಗರ ಮನ ಗೆದ್ದಿರುವ ಮತ್ಸ್ಯಗಂಧ ಚಲನಚಿತ್ರ ನಟ ಬೈಂದೂರು ತಾಲೂಕಿನ ನಾಗರಾಜ ಪೂಜಾರಿ ಅವರ ನಟನೆಗೆ ಸಿನಿ ಪ್ರೇಕ್ಷಕರು ಫಿದಾ ಆಗಿದ್ದಾರೆ.ಟೀಸರ್ ಹಾಗೂ ಮೇಕಿಂಗ್ ವಿಚಾರದಲ್ಲಿ ಸದ್ದು ಮಾಡುತ್ತಿರುವ ಮತ್ಸ್ಯಗಂಧ ಚಲನಚಿತ್ರ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುವುದು ಗ್ಯಾರಂಟಿ.
ಮತ್ಸ್ಯಗಂಧ ಚಲನಚಿತ್ರ ನಟ ನಾಗರಾಜ ಪೂಜಾರಿ ಅವರು ಬೈಂದೂರು ಶಂಕರ ಟಾಕೀಸ್ ನಲ್ಲಿ ಚಲನಚಿತ್ರವನ್ನು ಬಿಡುಗಡೆಗೋಳಿಸಿ ಮಾತನಾಡಿ, ಮತ್ಸ್ಯಗಂಧ ಎಂದರೆ ಮೀನಿಗೆ ಸಂಬಂಧಿಸಿದ ವಿಚಾರವಾಗಿದೆ ಈ ಚಿತ್ರ ಸಂಪೂರ್ಣವಾಗಿ ಮೀನುಗಾರರ ಬದುಕು ಮತ್ತು ಬಡವರ್ಗದ ಜನರನ್ನು ಪ್ರಭಾವಿ ವ್ಯಕ್ತಿಗಳು ಯಾವ ರೀತಿ ಬಳಸಿಕೊಳ್ಳುತ್ತಾರೇ ಎನ್ನುವ ವಿಚಾರದ ಬಗ್ಗೆಯೂ ಬೆಳಕನ್ನು ಚೆಲ್ಲಿದೆ ಎಂದು ಹೇಳಿದರು.ಸಿನಿಮಾವನ್ನು ನೊಡುವುದರ ಮುಖೇನ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಮತ್ಸ್ಯಗಂಧ ಚಲನಚಿತ್ರವನ್ನು ನೋಡಿದ ಸಿನಿ ಪ್ರೇಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಮತ್ಸ್ಯಗಂಧ ಚಲನಚಿತ್ರ ಶತ ದಿನ ಒಡಲಿ ಎಂದು ಶುಭಹಾರೈಸಿದರು.ಚಿತ್ರದಲ್ಲಿ ಪೃಥ್ವಿ ಅಂಬಾರ್ ಜೊತೆ ಭಜರಂಗಿ ಲೋಕಿ, ನಾಗರಾಜ್ ಬೈಂದೂರ್, ಪ್ರಶಾಂತ್ ಸಿದ್ದಿ, ಶರತ್ ಲೋಹಿತಾಶ್ವ, ಮೈಮ್ ರಾಮದಾಸ್ ಸೇರಿದಂತೆ ಪ್ರತಿಭಾನ್ವಿತ ನಟರು ನಟಿಸಿದ್ದಾರೆ.ಕನ್ನಡ ಪಿಚ್ಚರ್ ಅರ್ಪಿಸುವ, ಸಹ್ಯಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ನಿರ್ಮಾಣ ಆಗಿರುವ ಈ ಚಿತ್ರ ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ ಬಿ.ಎಸ್ ವಿಶ್ವನಾಥ್ ನಿರ್ಮಾಣದ ಈ ಚಿತ್ರಕ್ಕೆ ದೇವರಾಜ್ ಪೂಜಾರಿ ಆ್ಯಕ್ಷನ್ ಕಟ್ ಹೇಳಿದ್ದು, ಪ್ರಶಾಂತ್ ಸಿದ್ದಿ ಸಂಗೀತ ಸಂಯೋಜಿಸಿದ್ದಾರೆ. ಪ್ರವೀಣ್ ಛಾಯಾಗ್ರಹಣ ನೀಡಿದ್ದಾರೆ. ಟೀಸರ್ ಹಾಗೂ ಮೇಕಿಂಗ್ ವಿಚಾರದಲ್ಲಿ ಸದ್ದು ಮಾಡುತ್ತಿರುವ ‘ಮತ್ಸ್ಯಗಂಧ’ ರಾಜ್ಯಾದ್ಯಂತ ಚಿತ್ರಮಂದಿರ ಪ್ರವೇಶಿಸಿದ್ದು.ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿದೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…