ಕುಂದಾಪುರ:ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲ ಚಟುವಟಿಕೆಯನ್ನು ವೃದ್ಧಿಸುವ ದೃಷ್ಟಿಯಿಂದ ಕುಂದಾಪುರ ತಾಲೂಕಿನ ಬೈಂದೂರು ವಲಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ ಬುಧವಾರ ನಡೆದ ಮೆಟ್ರಿಕ್ ಮೇಳದ ಅಂಗವಾಗಿ ಶಾಲಾ ಆವರಣದಲ್ಲಿ ಆಯೋಜಿಸಿದ ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ಭರ್ಜರಿ ವ್ಯಾಪಾರ ಮಾಡುವುದರ ಮುಖೇನ ಗಮನ ಸೆಳೆದಿದ್ದಾರೆ.
ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ವಿವಿಧ ಬಗೆಯ ಹಣ್ಣುಗಳು,ಬಸಳೆ,ಹರಿವೆ,ಗೆಣಸು,ಮೆಣಸು,ತೆಂಗಿನಕಾಯಿ,ಸವತೆ ಕಾಯಿ,ಬದನೆಕಾಯಿ,ಇರುಳ್ಳಿ, ಬಾಳೆ ಹಣ್ಣು,ಸ್ಟೇಷನರಿ ಐಟಾಂ,ಜ್ಯೂಸ್ ಸೇರಿದಂತೆ ಹಲವು ಬಗೆಯ ವಸ್ತುಗಳನ್ನು ಸ್ಟಾಲ್‍ನಲ್ಲಿ ಇರಿಸಿ ಮಾರಾಟ ಮಾಡುವುದರ ಮುಖೇನ ವ್ಯಾಪಾರ ವಹಿವಾಟನ್ನು ಮಾಡಿದರು.ಶಾಲಾ ಶಿಕ್ಷಕರು,ಎಸ್‍ಡಿಎಂಸಿ ಸದಸ್ಯರು, ಪೋಷಕರು ವಿದ್ಯಾರ್ಥಿಗಳಿಂದ ವಸ್ತುಗಳನ್ನು ಖರೀದಿಸುವುದ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…