ಕುಂದಾಪುರ:ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಕುಂದಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಆಲೂರು ಶಾಲೆಯಲ್ಲಿ ವಿಜ್ಞಾನ ಮತ್ತು ಕಲಾ ಮೇಳ ಕಾರ್ಯಕ್ರಮ ಬುಧವಾರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಆಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ ಎನ್ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಪಂಚಾಯಿತಿ ಸದಸ್ಯ ಪ್ರಸನ್ನ ಕುಮಾರ್ ಶೆಟ್ಟಿ,ರವಿ ಶೆಟ್ಟಿ,ಎಸ್‍ಡಿಎಂಸಿ ಅಧ್ಯಕ್ಷ ದತ್ತಾತ್ರೇಯ ಭಟ್,ಪ್ರೌಢ ಶಾಲೆ ಪ್ರಭಾರ ಮುಖ್ಯೋಪಾಧ್ಯಾಯ ಉದಯ ಕುಮಾರ್ ಶೆಟ್ಟಿ,ಶಾಲಾ ಮುಖ್ಯೋಪಾಧ್ಯಾಯಿನಿ ಲಲಿತಾ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಿಜ್ಞಾನ ರಂಗೋಲಿ,ಕಾರ್ಯ ನಿರ್ವಹಣಾ ಮಾದರಿಗಳು,ವಿಜ್ಞಾನ ಚಿತ್ರಗಳು ಮತ್ತು ಕಲಾ ಪ್ರದರ್ಶನ ಜರುಗಿತು.ಲಲಿತಾ ಸ್ವಾಗತಿಸಿದರು.ವಿಜ್ಞಾನ ಶಿಕ್ಷಕಿ ವಿದ್ಯಾ ಪ್ರತಿಜ್ಞಾವಿಧಿ ಬೋಧಿಸಿದರು.ಸಹಶಿಕ್ಷಕ ದಿನಕರ ನಿರ್ವಹಿಸಿದರು.ಶಿಕ್ಷಕರಾದ ವಿಶ್ವನಾಥ,ವಿದ್ಯಾಗೌಡ,ಸುನಂದ,ಆಶಾರಾಣಿ,ಕಂಪ್ಯÇಟರ್ ಶಿಕ್ಷಕಿ ದೀಪಾ ಸಹಕರಿಸಿದರು.ದೈಹಿಕ ಶಿಕ್ಷಕ ವೀರೇಂದ್ರ ಜೋಗಿ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…