ಕುಂದಾಪುರ

ಬೈಂದೂರು:ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನೆ ವಾಪಾಸ್

Share

ಕುಂದಾಪುರ:ಬೈಂದೂರು ತಾಲೂಕಿನ ಶಿರೂರು ಭಾಗದ ದಲಿತರಿಗೆ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚದೇ ಇತರರಿಗೆ ನೀಡಿದ್ದಾರೆ ಇದು ದಲಿತರಿಗೆ ಮಾಡಿದ ಅನ್ಯಾಯ ಎಂದು ದಲಿತ ಮುಖಂಡರು ಆರೋಪಿಸಿ ಬೈಂದೂರು ತಾಲೂಕು ಸೌಧದ ಮುಂದೆ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಬೈಂದೂರು ತಹಸಿಲ್ದಾರ್, ಕುಂದಾಪುರ ತಾಲೂಕಿನ ಎಸಿ, ಬೈಂದೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ದಲಿತ ಮುಖಂಡರನ್ನು ಮನವೊಲಿಸುವ ಪ್ರಯತ್ನ ಮಾಡಿದರು ಹಾಗೂ ಉಪವಾಸ ಸತ್ಯಾಗ್ರಹವನ್ನು ಕೈ ಬಿಡುವಂತೆ ಮನವಿ ಮಾಡಿದರು,ದಲಿತ ಮುಖಂಡರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೆ ಧರಣಿ ಮುಂದುವರಿಸುತ್ತೇವೆ ಎಂದು ಹೇಳಿದರು,
ಇಂದು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ದಲಿತ ಮುಖಂಡರ ಸಮಸ್ಯೆಗಳನ್ನು ಆಲಿಸಿ ದಲಿತ ಮುಖಂಡರನ್ನು ಮನವೊಲಿಸಿ, ಬೈಂದೂರು ಹಾಗೂ ಶಿರೂರು ಮುಂತಾದ ಕಡೆ ದಲಿತರಿಗೆ ಮೀಸಲಿಟ್ಟ ಭೂಮಿಗೆ ಬದಲಾಗಿ ಪ್ರತ್ಯೇಕ ಸ್ಥಳ ನೀಡಬೇಕೆಂಬ ಬೇಡಿಕೆಗೆ ಇಲಾಖೆಗಳೊಂದಿಗೆ ಚರ್ಚಿಸಿ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ದಲಿತ ಮುಖಂಡರು ಉಪವಾಸ ಸತ್ಯಾಗ್ರಹ ಧರಣಿ ವಾಪಸು ತೆಗೆದುಕೊಂಡರು.ಈ ಸಂದರ್ಭ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್,ಬೈಂದೂರು ತಹಶೀಲ್ದಾರ ಪ್ರದೀಪ್‌ ಆ‌ರ್,ದಲಿತ ಮುಖಂಡ ರಾಘವೇಂದ್ರ ಶಿರೂರು,ಮಾಧವ ಬಾಕಡ,ರಮೇಶ ಶಿರೂರು,ರಾಮ ಎಮ್.ಮಯ್ಯಾಡಿ,ಮಹಾಲಕ್ಷ್ಮೀ ಬೈಂದೂರು,ಈಶ್ವರ ಶಿರೂರು,ವಾಸುದೇವ ಶಿರೂರು ಮೊದಲಾದವರು ಹಾಜರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago