ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ,ನಾಲ್ವರು ಶಂಕಿತರು ಪೊಲೀಸರ ವಶಕ್ಕೆ
ಬೆಂಗಳೂರು:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಅಬ್ದುಲ್ ಕಲಾಂ ಅವರ ಸ್ಪೂರ್ತಿಯಿಂದ ತೆರೆದಂತಹ ರಾಮೇಶ್ವರಂ ಕೆಫೆ, ಭಾರತದಾದ್ಯಂತ ಬ್ರಾಂಚ್ಗಳನ್ನ ಹೊಂದಿದೆ.ರಾಮೇಶ್ವರಂ ಕೆಫೆ ದೇಗುಲದ ಕಾನ್ಸೆಪ್ಟ್ನಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲೂ ಹಲವು ಬ್ರಾಂಚ್ಗಳಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಹಾಟ್ ಫೇವರೆಟ್ ಸ್ಪಾಟ್ ಕೂಡ ಆಗಿದೆ.ರಾಮೇಶ್ವರ ಕೆಫೆಯಲ್ಲಿ ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ ಆಗಿದೆ. ವಿವಿಧ ತನಿಖಾ ತಂಡಗಳು ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ























































































































































































































































































































































































































































































































































































































































































































































































































































































































































































































































































































































































































































































































































































































































































