ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ,ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮ ಯು.ರಾಜೇಶ ಕಾರಂತ್ ಉಪ್ಪಿನಕುದ್ರು ಅವರ ಸಾರಧ್ಯದಲ್ಲಿ ಸೋಮವಾರ ಮಂಕಿ ಶಾಲೆಯಲ್ಲಿನಡೆಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ತನ್ನ ತಾಯಿ ಕಲಿತ ಶಾಲೆಯನ್ನು ನೆನೆದು ದತ್ತು ಸ್ವೀಕಾರ ಮಾಡಿರುವುದು ಶ್ಲಾಘನೀಯ ಕೆಲಸವಾಗಿದೆ.ದಾನಿಗಳ ಸಹಕಾರದಿಂದ ಬೈಂದೂರು ಕ್ಷೇತ್ರದಲ್ಲಿ ಸರಕಾರಿ ಶಾಲೆಗಳನ್ನು ಬಲಗೊಳಿಸುವ ಕೆಲಸ ಮಾಡಲಾಗುತ್ತಿದ್ದು.ದಾನಿಗಳ ವಿಶಿಷ್ಟ ಕಲ್ಪನೆಯೊಂದಿಗೆ ಸರಕಾರಿ ಶಾಲೆಗಳು ಬೆಳಕನ್ನು ಕಾಣಲಿದೆ ಎಂದು ಹೇಳಿದರು.
ಯು.ರಾಜೇಶ ಕಾರಂತ ಉಪ್ಪಿನಕುದ್ರು ಅವರು ಮಂಕಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಮಾತನಾಡಿ,ಮಾತ್ರಾಶ್ರೀ ಅವರ ಆಶಯ ಮತ್ತು ಶಾಲೆ ಮೇಲಿನ ಅಭಿಮಾನದಿಂದ ಮಂಕಿ ಶಾಲೆಯನ್ನು ದತ್ತು ಸ್ವೀಕಾರ ಮಾಡಲಾಗಿದೆ ಎಂದು ಹೇಳಿದರು.ಶಾಲೆಯನ್ನು ದತ್ತು ಸ್ವೀಕಾರ ಮಾಡಲು ಭಾಗ್ಯವನ್ನು ಒದಗಿಸಿಕೊಟ್ಟವರಿಗೆ ಧನದ್ಯವಾದವನ್ನು ಸಲ್ಲಿಸಿದರು.ಮಕ್ಕಳ ಶೈಕ್ಷಣಿಕ ಜೀವನಕ್ಕೆ ಸಹಕಾರಿ ಆಗುವಂತಹ ವಿದ್ಯಾ ದೇಗುಲವನ್ನು ಅಭಿವೃದ್ಧಿಗೊಳಿಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಮಾತನಾಡಿ,1946 ರಲ್ಲಿ ಮಂಕಿ ಶಾಲೆ ಸ್ಥಾಪನೆಗೊಂಡಿದೆ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಂಕಿ ಶಾಲೆಯನ್ನು ರಾಜೇಶ್ ಕಾರಂತ ಅವರು ದತ್ತು ಸ್ವೀಕಾರ ಮಾಡಿರುವುದು ಊರಿನವರಿಗೆ ಬಹಳಷ್ಟು ಖುಷಿಕೊಟ್ಟಿದೆ.ಸರಕಾರಿ ಶಾಲೆಗಳು ಉಳಿದರೆ ಮಾತ್ರ ಗ್ರಾಮೀಣ ಪ್ರದೇಶದ ಜನರ ಮಕ್ಕಳು ಶಿಕ್ಷಣವಂತರಾಗಲು ಸಾಧ್ಯವಿದೆ ಎಂದು ಹೇಳಿದರು.
ಶಾರದ ಕಾರಂತ ಉಪ್ಪಿನಕುದ್ರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್,ಶಿಕ್ಷಣ ಸಂಯೋಜಕ ಯೋಗೀಶ್,ಶಿಕ್ಷಕ ಭಾಸ್ಕರ ಮಯ್ಯ,ಎಸ್‍ಡಿಎಂಸಿ ಅಧ್ಯಕ್ಷೆ ಸುಮತಿ ಪೂಜಾರಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್,ಸ್ಪಂದನ ಯುವ ಸಂಘ ಅಧ್ಯಕ್ಷ ರಘು ಎಂ,ನಾರಾಯಣ ಕೆ ಗುಜ್ಜಾಡಿ ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಸ್ವಾಗತಿಸಿದರು.ಅಕ್ಷಯ ವಂದಿಸಿದರು.
ವರದಿ:ಜಗದೀಶ ದೇವಾಡಿಗ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ-9916284048
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…