ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆ ಉದ್ಘಾಟನೆ
ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಮೊವಾಡಿ ಶ್ರೀಮಾಣಿಸಿದ್ಧಲಿಂಗೇಶ್ವರ ದೇವಸ್ಥಾನದ ಸುವರ್ಣಮಹೋತ್ಸ ಮತ್ತು ಮಹಾಶಿವರಾತ್ರಿ ಉತ್ಸವದ ಅಂಗವಾಗಿ ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆ ಕಾರ್ಯಕ್ರಮ ಗುರುವಾರ ನಡೆಯಿತು.
ಭಾರಂಗಿ ಕೂಡ್ಲಿಮಠ ಮಹಾ ಸಂಸ್ಥಾನ ತಾಳಗುಪ್ಪ ಸಾಗರ ಪರಮ ಪೂಜ್ಯ ಶ್ರೀಸಿದ್ಧವೀರ ಮಹಾಸ್ವಾಮೀಜಿಗಳು ಉದ್ಘಾಟಿಸಿದರು.ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಶ್ರೀಮಾಣಿಸಿದ್ಧಲಿಂಗೇಶ್ವರ ದೇವಸ್ಥಾನದ ಗೌರವಾಧ್ಯಕ್ಷ ಅನಂತ ಮೊವಾಡಿ ಮತ್ತು ಅತಿಥಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.