ಕುಂದಾಪುರ

ಕೆ.ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆಗೆ ಸ್ವಾಗತ,ಪಕ್ಷ ಘೋಷಿಸಿದ ಅಭ್ಯರ್ಥಿಗೆ ಬೆಂಬಲ

Share

ಕುಂದಾಪುರ:ಕಾಂಗ್ರೆಸ್ ಪಕ್ಷ ಸೇರುವವರನ್ನು ಸ್ವಾಗತಿಸುವುದಾಗಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಗೂ ಪಕ್ಷದ ಹಿರಿಯ ಮುಖಂಡರು ಹೇಳಿದ್ದು, ಪಕ್ಷದ ನಿಲುವಿಗೆ ನಮ್ಮ‌ ಸಹಮತ ಇರುವುದಾಗಿ ಮಾಜಿ‌ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ. ದಿ‌ನೇಶ್ ಹೆಗ್ಡೆ ಮೊಳಹಳ್ಳಿ ಮುಂತಾದವರು ಜಂಟಿ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.ಮಾಜಿ‌ ಸಂಸದರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆಯವರು ಮರಳಿ ಕಾಗ್ರೆಸ್ ಪಕ್ಷ‌ ಸೇರ್ಪಡೆಯಾಗುವ ಕುರಿತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈಗಾಗಲೇ ಮಾತುಕತೆ ನಡೆಯುತ್ತಿರುವ ಬಗ್ಗೆ ಮಾಹಿತಿಗಳಿದ್ದು, ಹಿಂದೆ ಕಾಂಗ್ರೆಸ್ ಪಕ್ಷದ ಸಂಸದರಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರ‌ ವಿಶ್ವಾಸವನ್ನು ಗಳಿಸಿಕೊಂಡಿದ್ದ ಅವರು, ಮರಳಿ ಕಾಂಗ್ರೆಸ್‌ ಪಕ್ಷವನ್ನು ಸೇರುವುದಿದ್ದಲ್ಲಿ ನಾವು ಸ್ವಾಗತಿಸುತ್ತೇವೆ.ಕಾಂಗ್ರೆಸ್ ಪಕ್ಷದೊಂದಿಗೆ ಅಪರಿಮಿತ ಸಂಬಂಧಗಳನ್ನು‌ ಹೊಂದಿರುವ ಚಿಕ್ಕಮಗಳೂರ-ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಹೈಕಮಾಂಡ್ ಯಾರೇ ಅಭ್ಯರ್ಥಿಗಳನ್ನು‌ ಘೋಷಣೆ ಮಾಡಿದರೂ ಪಕ್ಷದ ನಿಷ್ಠಾವಂತ‌ ಕಾರ್ಯಕರ್ತರುಗಳಾದ ನಾವುಗಳು ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.ಜಿಲ್ಲಾ‌ ಕಾಂಗ್ರೆಸ್ ಸಮಿತಿಯ ವಕ್ತಾರ ಕೆ. ವಿಕಾಸ್ ಹೆಗ್ಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಸರಸು ಡಿ ಬಂಗೇರ, ಜ್ಯೋತಿ ವಿ ಪುತ್ರನ್, ರಾಜ್ಯ ಐಟಿ ಸೆಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ದೇವಾನಂದ ಶೆಟ್ಟಿ ಹಳ್ನಾಡು, ರಮೇಶ್ ಗಾಣಿಗ ಕೊಲ್ಲೂರು, ಮದನ್ ಕುಮಾರ್ ಉಪ್ಪುಂದ, ವಿಜಯಾಧರ ಪೂಜಾರಿ, ಪುರಸಭಾ ಸದಸ್ಯ ಅಬು ಮಹಮ್ಮದ್, ಎನ್ಎಸ್ ಯುಐ ಮುಖಂಡ ಸುಜನ್ ಶೆಟ್ಟಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago